ಹಾಸನ : ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಸ್ಥಳದಲ್ಲೇ ಮಹಿಳೆ ಸಾವು!

ಹಾಸನ : ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯಲ್ಲಿ ನಡೆದಿದೆ. ಹಲಸುಲಿಗೆ ಗ್ರಾಮದ ಗುಲಾಬಿ ಎಂಬುವವರು ಮೃತ ಮಹಿಳೆ.

ಮಕ್ಕಳು ಅಳುತ್ತಿದ್ದರಿಂದ ಚಾಕ್ಲೆಟ್, ಬಿಸ್ಕೆಟ್ ತರಲು ಡಿವೈಡರ್ ದಾಟಿ ಅಂಗಡಿಗೆ ತೆರಳುತ್ತಿದ್ದ ಮಹಿಳೆಗೆ ಇನೊವಾ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ‌ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಜಾತಿ ಜನಗಣತಿ ವರದಿ ಜಾರಿ ಮಾಡಿದ್ರೆ ಸಿದ್ದರಾಮಯ್ಯ ಸರ್ಕಾರ ಪತನ ಫಿಕ್ಸ್ – ಒಕ್ಕಲಿಗರ ಸಂಘದ ಖಜಾಂಚಿ ಬಾಲು ವಾರ್ನಿಂಗ್!

Btv Kannada
Author: Btv Kannada

Read More