ನವದೆಹಲಿ : ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸ್ಥಾನಕ್ಕೆ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರ ಹೆಸರನ್ನು ಹಾಲಿ ಸಿಜೆಐ ನ್ಯಾ. ಸಂಜೀವ್ ಖನ್ನಾ ಅವರು ಶಿಫಾರಸು ಮಾಡಿದ್ದಾರೆ.
ಸುಪ್ರೀಂ ಕೋರ್ಟ್ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿರುವ ನ್ಯಾ. ಗವಾಯಿ ಅವರನ್ನು ಮುಂದಿನ ಸಿಜೆಐ ಆಗಿ ನೇಮಿಸಲು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ. ನ್ಯಾ. ಗವಾಯಿ ಅವರು ಮೇ 14 ರಂದು ಸುಪ್ರೀಂ ಕೋರ್ಟ್‌ನ 52ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಸಿಜೆಐ ಖನ್ನಾ ಅವರು ಮೇ 13 ರಂದು ನಿವೃತ್ತಿಯಾಗುತ್ತಿದ್ದಾರೆ.
ಮಹಾರಾಷ್ಟ್ರದ ಅಮರಾವತಿ ಮೂಲದವರಾದ ಇವರು 2019ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು.
ಇದನ್ನೂ ಓದಿ : ಸಿನಿಮಾದಲ್ಲಿ ಚಾನ್ಸ್ ಬೇಕಾದ್ರೆ ದೇಹ ಕೊಡು ಎಂದಿದ್ದ ಡೈರೆಕ್ಟರ್ – ಕರಾಳ ಸತ್ಯ ಬಿಚ್ಚಿಟ್ಟ ಬಿಗ್ಬಾಸ್ ಮಾಜಿ ಸ್ಪರ್ಧಿ!

Author: Btv Kannada
Post Views: 430