ಬೆಂಗಳೂರು : ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಮಳೆಯಾಗುವ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಇಂದು ಭಾರೀ ಮಳೆಯಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 20ರವರೆಗೆ ಭರ್ಜರಿ ಮಳೆಯೊಂದಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿಯ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಿಗೆ ಇಂದು (ಏಪ್ರಿಲ್ 16) ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 50 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರೀ ಮಳೆ, ಗುಡುಗು ಮತ್ತು ಮಿಂಚಿನ ಸಾಧ್ಯತೆಯಿದೆ ಎಂದು IMD ತಿಳಿಸಿದೆ.
ಇದನ್ನೂ ಓದಿ : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 3 ಕಾರುಗಳ ನಡುವೆ ಭೀಕರ ಅಪಘಾತ – ಓರ್ವ ಸಾವು!
