ಸ್ಟಾರ್ಕ್ ಮ್ಯಾಜಿಕ್‌.. ರೋಚಕ ಸೂಪರ್‌ ಓವರ್‌ನಲ್ಲಿ RR ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್!

ನವದೆಹಲಿ : ತೀವ್ರ ರೋಚಕತೆಯಿಂದ ಕೂಡಿದ್ದ 2025ರ ಐಪಿಎಲ್​ನ 32ನೇ ಪಂದ್ಯದಲ್ಲಿ ಮಿಚೆಲ್‌ ಸ್ಟಾರ್ಕ್ ಮ್ಯಾಜಿಕ್‌ ಬೌಲಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೂಪರ್ ಓವರ್‌ನಲ್ಲಿ ಮಣಿಸಿ ಅಮೋಘ ಗೆಲುವು ದಾಖಲಿಸಿದೆ.

ಬುಧವಾರ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 188 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಕೂಡ ಅಷ್ಟೇ ಮೊತ್ತವನ್ನು ಪೇರಿಸಿತು. ಹೀಗಾಗಿ ಪಂದ್ಯ ರೋಚಕ ಸೂಪರ್ ಓವರ್‌ನತ್ತ ಸಾಗಿತು. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 11 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ತಂಡ ಇನ್ನು 2 ಎಸೆತಗಳು ಬಾಕಿ ಇರುವಾಗಲೇ ಪಂದ್ಯವನ್ನು ಗೆದ್ದುಕೊಂಡಿತು.

ಸೂಪರ್ ಓವರ್‌ನಲ್ಲಿ ಡೆಲ್ಲಿ ಪರವಾಗಿ ಕೆಎಲ್ ರಾಹುಲ್ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಕ್ರಮವಾಗಿ 1 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಗೆಲುವಿನೊಂದಿಗೆ ಡೆಲ್ಲಿ ತಂಡ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಇತ್ತ ರಾಜಸ್ಥಾನ್​ಗೆ ಟೂರ್ನಿರ್ಯಲ್ಲಿ ಸತತ 3ನೇ ಸೋಲು ಎದುರಾಗಿದೆ.

ಇದನ್ನೂ ಓದಿ : ಏ.20ರವರೆಗೆ ರಾಜ್ಯದ 14 ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ.. ಬೆಂಗಳೂರಿಗೆ ಯೆಲ್ಲೋ ಅಲರ್ಟ್‌!

Btv Kannada
Author: Btv Kannada

Read More

Read More