ಬೆಂಗಳೂರು : ಕಟ್ಟಡ ಕಾರ್ಮಿಕ ಕೆಲಸ ಮಾಡುತ್ತಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದ ಡಾಲರ್ಸ್ ಕಾಲೋನಿಯಲ್ಲಿ ನಡೆದಿದೆ. 45 ವರ್ಷದ ಮೆಹಬೂಬ್, 35 ವರ್ಷದ ಪರ್ವಿನ್ ಮೃತ ದುರ್ದೈವಿಗಳು.
ಸಂಜಯ್ ನಗರದ ಡಾಲರ್ಸ್ ಕಾಲೋನಿಯಲ್ಲಿ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಪರ್ವಿನ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪತಿ ಮೆಹಬೂಬ್ ಮೃತದೇಹ ನೆಲದ ಮೇಲೆ ಬಿದ್ದ ರೀತಿಯಲ್ಲಿ ಸಿಕ್ಕಿದೆ.

Author: Btv Kannada
Post Views: 744