ಪೀಣ್ಯ ಫ್ಲೈಓವರ್ ಮೇಲೆ ಹೊತ್ತಿ ಉರಿದ ಲಾರಿ – ಚಾಲಕ ಅಪಾಯದಿಂದ ಪಾರು!

ಬೆಂಗಳೂರು : ಫ್ಲೈಓವರ್ ಮೇಲೆ ಲಾರಿಯೊಂದು ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ. ಲಾರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕೂಡಲೇ ಲಾರಿಯಿಂದ ಕೆಳಗಿಳಿದಿದ್ದಾನೆ.

ಬೆಂಕಿ ಹೊತ್ತಿಕೊಂಡ ಹಿನ್ನೆಲೆ ನಗರದ ಕಡೆಗೆ ಕೆಲಗಂಟೆಗಳ ಕಾಲ ಪೀಣ್ಯ ಫ್ಲೈಓವರ್ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ನಗರದ ಕಡೆಗೆ ಬರುವವರು ಫ್ಲೈಓವರ್ ಕೆಳಗಡೆ ಬರುವಂತೆ ಸೂಚನೆ ನೀಡಲಾಗಿತ್ತು.

ಘಟನೆ ನಡೆದ ಕೂಡಲೇ ಸ್ಥಳೀಯರು 112ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ : ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ನಟನೆಯ “ಬ್ಯಾಂಕ್ of ಭಾಗ್ಯಲಕ್ಷ್ಮಿ” ಚಿತ್ರದ ಫಸ್ಟ್ ಸಾಂಗ್ ರಿಲೀಸ್!

Btv Kannada
Author: Btv Kannada

Read More

Read More