ಮಂಗಳೂರು : ಚಿಂತಕ ಚಕ್ರವರ್ತಿ ಸೂಲಿಬೆಲೆಯವರು ಮತಾಂತರ ಮಾಡುವಂತೆ ಹಿಂದೂಗಳಿಗೆ ಬಹಿರಂಗ ಕರೆ ನೀಡಿದ್ದಾರೆ. ಉಜಿರೆಯ ಶ್ರೀರಾಮೋತ್ಸವದಲ್ಲಿ ಮಾತನಾಡಿದ ಅವರು, ಸರ್ಕಾರ ನೀಡಿರುವ ಮತಾಂತರ ಕಾನೂನನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಹೇಳಿದರು.
‘ಜನಸಂಖ್ಯೆ ಜಾಸ್ತಿಯಾಗಲು 2-3 ಮಕ್ಕಳನ್ನು ಮಾಡಿಕೊಳ್ಳಿ’, ಬಿಜೆಪಿ ಸರ್ಕಾರ ಇದ್ದಾಗ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತು. ಹೊಸ ಸರ್ಕಾರ ಬಂದಾಗ ಆ ಕಾನೂನು ತೆಗೆದು ಹಾಕಿತು. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ ಅಂತ ಸರ್ಕಾರವೇ ಅಧಿಕೃತವಾಗಿ ಹೇಳಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರದ ಕಾನೂನುಗಳು ನಮ್ಮಲ್ಲಿವೆ, ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮತಾಂತರ ಮಾಡುವುದು ಕಷ್ಟ ಏನಲ್ಲ. ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಹಿಂದೂ ಧರ್ಮಕ್ಕೆ ಸೇರಿದವನು. ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ. ಆದರೆ ಅವರಿಗೆಲ್ಲಾ (ಮುಸ್ಲಿಂ) ಒಬ್ಬನೇ ದೇವರು. ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು. ಆದರೆ ನಮಗೆ 33 ಕೋಟಿ ದೇವತೆಗಳು. ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ. ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದ್ದಾನೆ. ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥಸ್ವಾಮಿ ಇದ್ದಾನೆ. ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ. ಎಲ್ಲಿ ಬೇಕಾದರೂ ಹೋಗ್ತೀನಿ ಎಂದರು.
ಅವರಿಗೆ ಹೇಳಿ, ಒಂದೇ ದೇವರು ಒಳ್ಳೆಯದೋ ಅಥವಾ 33 ಕೋಟಿ ದೇವರು ಒಳ್ಳೆಯದೋ? ಅಂತ. ಮಿತ್ರರೇ ಅವರು ಬಂದು ಹೇಳ್ತಾರೆ, ನಮ್ಮದೊಂದೇ ಪುಸ್ತಕ, ನಿಮ್ಮತ್ರ ಬಹಳ ಪುಸ್ತಕ ಇದೆ ಎಂದು. ಆಗ ನೀವು ಹೇಳಿ, ನಮ್ಮತ್ರ ಲೈಬ್ರಿರಿ ಇದೆ, ಯಾವುದೋ ಒಂದು ಪುಸ್ತಕ ಸುಡುವುದರಿಂದ ಹಿಂದೂ ಧರ್ಮ ಸಾಯಲ್ಲ. ನಿಮ್ಮ ಮತ-ಪಂಥಗಳಲ್ಲಿ ಹೆಣ್ಮಕ್ಕಳಿಗೆ ಗೌರವ ಇಲ್ಲ ಎಂದು ಅವರಿಗೆ ಹೇಳಿ. ಇಲ್ಲಿರೋ ಹೆಣ್ಮಕ್ಕಳಿಗೆ ಮುಖ ಮುಚ್ಚಿಕೊಳ್ಳಿ ಅಂತ ಹೇಳಿಲ್ಲ, ಗಂಡು ಮಕ್ಕಳ ಪಕ್ಕದಲ್ಲಿ ಕೂರಬೇಡಿ ಅಂತ ಹೇಳಿಲ್ಲ. ಬರೋರಿಗೆ ಬನ್ನಿ ಅಂತ ಹೇಳಿ, ಬರುವವರನ್ನು ಮುಕ್ತ ಕಂಠದಿಂದ ಸ್ವಾಗತಿಸಿ, ಸಂಖ್ಯೆ ವೃದ್ಧಿಸಲು ಮಕ್ಕಳೇ ಆಗಬೇಕೆಂದಿಲ್ಲ. ನಮ್ಮ ಹೃದಯ ಸ್ವಲ್ಪ ವಿಶಾಲ ಆಗಬೇಕಿದೆ ಎಂದು ಕರೆ ಕೊಟ್ಟಿದ್ದಾರೆ.
ಇದನ್ನೂ ಓದಿ : ಯೂರೋಪಿನ ಐರ್ಲೆಂಡ್ ದೇಶದಲ್ಲಿ ಶ್ರೀ ರಾಮನವಮಿ ಆಚರಣೆ – ಉತ್ಸವದಲ್ಲಿ ನೂರಾರು ಭಕ್ತರು ಭಾಗಿ!
