ಬೆಂಗಳೂರು : ರಾಜ್ಯ ಸರ್ಕಾರದಲ್ಲಿ ಪಂಚ ಗ್ಯಾರಂಟಿಗಳ ಹೊರತಾಗಿಯೂ ಅಭಿವೃದ್ಧಿ ಕಾರ್ಯಗಳು ಮುಂದುವರೆಯುತ್ತಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಸಚಿವರು ಹಾಗೂ ಶಾಸಕರು ಭೇಟಿ ಮಾಡಿ ತಮ್ಮ ತಮ್ಮ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತಿದ್ದಾರೆ. ಶಾಸಕರ ಮನವಿಗೆ ಸಿಎಂ, ಡಿಸಿಎಂ ಸಕರಾತ್ಮಕವಾಗಿ ಸ್ಪಂದಿಸಿ ಹಣ ಬಿಡುಗಡೆ ಮಾಡುತ್ತಿದ್ದಾರೆ.
ಬೆಂಗಳೂರಿನ ಸದಾಶಿನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಹಾಗೂ ಆರ್ ಮಂಜುನಾಥ್ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್ ಹಾಗೂ ಬೆಂಗಳೂರಿನ ಟಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಆರ್ ಮಂಜುನಾಥ್ ಅವರು ತಮ್ಮ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು ಹಾಗೂ ಯೋಜನೆಗಳ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ.
ಡಿಕೆಶಿ ಜೊತೆಗಿನ ಚರ್ಚೆ ವೇಳೆ ತುಮಕೂರು ಗ್ರಾಮಾಂತರ ಕ್ಷೇತ್ರದ ಸಂಪೂರ್ಣ ಮಾಹಿತಿಯನ್ನು ಡಿಸಿ ಗೌರಿಶಂಕರ್ ನೀಡಿದ್ದಾರೆ. ಈ ಸಂಭ್ರಮದ ಭೇಟಿಯನ್ನು ಮಾಜಿ ಶಾಸಕ ಡಿಸಿ ಗೌರಿಶಂಕರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ಆ್ಯಕ್ಷನ್, ಕಾಮಿಡಿ ಚಿತ್ರ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಏ.25ಕ್ಕೆ ರಾಜ್ಯಾದ್ಯಂತ ತೆರೆಗೆ!
