ಮೈಸೂರು : ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ತಾಯಿಯನ್ನೇ ಮಗ ಕೊಲೆ ಮಾಡಿರುವಂತಹ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ನವಿಲೂರ ಗ್ರಾಮದಲ್ಲಿ ನಡೆದಿದೆ. 60 ವರ್ಷದ ಜಯಮ್ಮ ಕೊಲೆಯಾದ ದುರ್ದೈವಿ.
ಗಂಡನಿಗೆ ಹುಷಾರಿಲ್ಲದ ಕಾರಣ ಜಯಮ್ಮ 90 ಸಾವಿರ ರೂ ಹಣ ಕೂಡಿಟ್ಟಿದ್ದರು. ಇದೇ ಹಣ ನೀಡುವಂತೆ ಮಗ ಪದೇ ಪದೇ ಪೀಡಿಸುತ್ತಿದ್ದ. ಅತ್ತ ತಂದೆ ಆಸ್ಪತ್ರೆಗೆ ತೆರಳಿದ ವೇಳೆ ಇತ್ತ ಮಗ ತನ್ನ ತಾಯಿಯನ್ನು ಕೈಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಈ ಪ್ರಕರಣ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಆರೋಪಿ ಸ್ವಾಮಿಯನ್ನ ಬಂಧಿಸಿದ್ದಾರೆ.
ಇದನ್ನೂ ಓದಿ : ಕಾರವಾರದಲ್ಲಿ ಮಾಜಿ ನಗರಸಭಾ ಸದಸ್ಯನ ಬರ್ಬರ ಹತ್ಯೆ!

Author: Btv Kannada
Post Views: 202