ನಿವೃತ್ತ DG-IGP ಓಂಪ್ರಕಾಶ್ ಬರ್ಬರ ಹತ್ಯೆ – ಪತ್ನಿಯಿಂದಲೇ ಕೊಲೆಯಾಗಿರೋ ಶಂಕೆ!

ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂಪ್ರಕಾಶ್ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದ್ದು, ಹೆಂಡತಿಯೇ ಕೊಲೆ ಮಾಡಿರೋ ಅನುಮಾನ ವ್ಯಕ್ತವಾಗಿದೆ.

ಮನೆಯಲ್ಲೇ ಅವರ ಮೃತದೇಹ ಪತ್ತೆಯಾಗಿದ್ದು, ಇಡೀ ಮನೆ ರಕ್ತಸಿಕ್ತವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸದ್ಯ ಅವರ ಹೆಂಡತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

1981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು. 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದ ಓಂಪ್ರಕಾಶ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿದ್ದಾರೆ.

ಇದನ್ನೂ ಓದಿ : ಮೈಸೂರು : ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಕೊಲೆಗೈದ ಪಾಪಿ ಮಗ!

Btv Kannada
Author: Btv Kannada

Read More