ಮುಲ್ಲಾನ್‌ಪುರ : ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇದೀಗ ಮತ್ತೆ ತವರಿನಾಚೆ ಗೆಲುವಿನ ಹಳಿಗೆ ಮರಳುವಲ್ಲಿ ಯಶಸ್ವಿಯಾಗಿದೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ.
ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. 158 ರನ್‌ಗಳ ಗುರಿಯನ್ನು 7 ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.
ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು ಮೊದಲ ಓವರ್‌ನಲ್ಲೇ ಫಿಲ್ ಸಾಲ್ಟ್ ವಿಕೆಟ್ ಕಳೆದುಕೊಂಡಿತು. ಫಿಲ್ ಸಾಲ್ಟ್ ಕೇವಲ ಒಂದು ರನ್ ಗಳಿಸಿ ಅರ್ಶದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಜತೆಯಾದ ಕನ್ನಡಿಗ ದೇವದತ್ ಪಡಿಕ್ಕಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಮೂಲಕ ಅಂಕಪಟ್ಟಿಯಲ್ಲಿ RCB 3ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.
ಇದನ್ನೂ ಓದಿ : ಪತ್ನಿ ಪಲ್ಲವಿಯಿಂದಲೇ ಕೊಲೆಯಾದ ಮಾಜಿ ಡಿಜಿ-ಐಜಿಪಿ ಓಂಪ್ರಕಾಶ್!
