ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ನಿನ್ನೆ ತಮ್ಮ 72ನೇ ಹುಟ್ಟುಹಬ್ಬವನ್ನು ಆಚರಿಸಕೊಂಡಿದ್ದಾರೆ. ರಾಜ್ಯದ ನಾನಾ ಭಾಗಗಳಿಂದ ಸಚಿವ ಡಾ.ಹೆಚ್.ಸಿ.ಮಹದೇವಪ್ಪನವರಿಗೆ ಅಭಿಮಾನಿಗಳು, ಸಚಿವರು, ಶಾಸಕರುಗಳು ಜನ್ಮದಿನದ ಶುಭಾಶಯ ತಿಳಿಸದ್ದಾರೆ.
ವಿಶೇಷವಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಪತ್ರದ ಮೂಲಕ ಹೆಚ್.ಸಿ.ಮಹದೇವಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸದ್ದಾರೆ. “ಈ ದಿನ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ತಮಗೆ ನನ್ನ ಹೃದಯಪೂರ್ವಕ ಶುಭಾಶಯಗಳು.

ಕಾಂಗ್ರೆಸ್ ಪಕ್ಷದ ಗೌರವಾನ್ವಿತ ಹಿರಿಯ ನಾಯಕರೂ, ಎಲ್ಲಾ ವರ್ಗಗಳ ಧ್ವನಿಯೂ ಆಗಿರುವ ತಾವು ರಾಜಕೀಯ ಹಾಗೂ ಸಾಮಾಜಿಕ ರಂಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯಕ್ಕೆ ಅಮೂಲ್ಯವಾದ ಸೇವೆಯನ್ನು ಸಲ್ಲಿಸುತ್ತಿದ್ದೀರಿ. ಭಗವಂತನು ತಮಗೆ ಉತ್ತಮ ಆಯುರಾರೋಗ್ಯ ಹಾಗೂ ಸಂತೋಷ ಭರಿತ ದೀರ್ಘಾಯುಷ್ಯವನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿಕೆಶಿ ಶುಭಕೋರಿದ್ಧಾರೆ.
ಈ ಸಂಬಂಧ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವ ಹೆಚ್.ಸಿ.ಮಹದೇವಪ್ಪನವರು, ನಿಮ್ಮ ಪ್ರೀತಿಯ ಮಾತುಗಳು ಮತ್ತು ಶುಭ ಹಾರೈಕೆಗೆ ನನ್ನ ನಮನಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ : ರೋಹಿತ್, ಸೂರ್ಯಕುಮಾರ್ ಅಬ್ಬರಕ್ಕೆ ಚೆನ್ನೈ ತತ್ತರ – ತವರಲ್ಲಿ ಮುಂಬೈಗೆ 9 ವಿಕೆಟ್‌ಗಳ ಭರ್ಜರಿ ಜಯ!







