ಕೋಲ್ಕತ್ತಾ : ಗುಜರಾತ್ ಟೈಟಾನ್ಸ್ ತಂಡವು ಕೆಕೆಆರ್ ತಂಡವನ್ನ ಸೋಲಿಸಿ ಅಗ್ರಸ್ಥಾನದಲ್ಲಿ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. ನಿನ್ನೆ ನಡೆದ ಪಂದ್ಯದಲ್ಲಿ GT ಪರ ಆರಂಭಿಕ ಬ್ಯಾಟರ್‌ಗಳಾದ ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್, ಜೋಸ್ ಬಟ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ 39 ರನ್‌ಗಳ ಭರ್ಜರಿ ಜಯ ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್, ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ಪೇರಿಸಿತು. ಟೈಟನ್ಸ್ ನೀಡಿದ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನಿಗದಿತ ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಸೋಲಿಗೆ ಶರಣಾಯಿತು.
ಗುಜರಾತ್ ಪರ ಮೊಹಮ್ಮದ್ ಸಿರಾಜ್, ರಶೀದ್ ಖಾನ್, ಪ್ರಸಿದ್ಧ್ ಕೃಷ್ಣ ತಲಾ 2 ವಿಕೆಟ್, ವಾಷಿಂಗ್ಟನ್ ಸುಂದರ್, ಸಾಯಿ ಕಿಶೋರ್, ಇಶಾಂತ್ ಶರ್ಮಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.
ಗುಜರಾತ್ ಪರ ಶುಭಮನ್ ಗಿಲ್ 55 ಎಸೆತಗಳಲ್ಲಿ 3 ಸಿಕ್ಸರ್, 10 ಬೌಂಡರಿಗಳ ನೆರವಿನಿಂದ 90 ರನ್ ಗಳಿಸಿ ಮಿಂಚಿದರು. ಸಾಯಿ ಸುದರ್ಶನ್ 36 ಎಸೆತಗಳಲ್ಲಿ 52 ರನ್ ಕಲೆಹಾಕಿದರು. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬಟ್ಲರ್ 23 ಎಸೆತಗಳಲ್ಲಿ 41 ರನ್ ಕಲೆ ಹಾಕಿ ಔಟಾಗದೆ ಉಳಿದರು.
ಇದನ್ನೂ ಓದಿ : ಚಾಮರಾಜನಗರದಲ್ಲಿ ಅಪರಿಚಿತ ವಾಹನ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು!
