ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕನ್ನಡಿಗ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ.
ಜಮ್ಮು & ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಲರ್ಟ್ ಆಗಿದ್ದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ತಕ್ಷಣ ಕಾರ್ಯಪ್ರವತ್ತರಾಗುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ಸಿಎಂ ಅವರ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಈಗಾಗಲೇ ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ.
ಜಮ್ಮು ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದ ತಂಡದಲ್ಲಿ ಪೊಲೀಸ್ ಅಧಿಕಾರಿಗಳೂ ತೆರಳಿದ್ದು ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ :ಯಾವುದೇ ಕ್ಷಣ BBMP ಮುಖ್ಯ ಕಮಿಷನರ್ ಟ್ರಾನ್ಸ್ಫರ್ – ನಗರಾಭಿವೃದ್ದಿ ಇಲಾಖೆಗೆ ತುಷಾರ್ ಗಿರಿನಾಥ್ ವರ್ಗಾವಣೆ ಸಾಧ್ಯತೆ!
