ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಎಲ್‌ಎಸ್‌ಜಿ ಮಾಜಿ ನಾಯಕ ಕೆಎಲ್ ರಾಹುಲ್ ಅಜೇಯ ಅರ್ಧಶತಕ ಗಳಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್‌ಗೆ ಸುಲಭ ಗೆಲುವು ತಂದುಕೊಟ್ಟರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಭದ್ರಪಡಿಸಿಕೊಂಡಿದ್ದರೆ, ಲಕ್ನೋ ತಂಡ 5ನೇ ಸ್ಥಾನಕ್ಕೆ ಕುಸಿದಿದೆ.
ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೆಂಟ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಲಕ್ನೋ ನೀಡಿದ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 17.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಗೆಲುವು ಸಾಧಿಸಿದೆ.
ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕರುಣ್ ನಾಯರ್ 9 ಎಸೆತಗಳಲ್ಲಿ 15, ಅಭಿಷೇಕ್ ಪೊರೆಲ್ 36 ಎಸೆತಗಳಲ್ಲಿ 51, ಕೆಎಲ್ ರಾಹುಲ್ ಔಟಾಗದೇ 42 ಎಸೆತಗಳಲ್ಲಿ 57 ರನ್, ಅಕ್ಷರ್ ಪಟೇಲ್ ಔಟಾಗದೇ 20 ಎಸೆತಗಳಲ್ಲಿ 34 ರನ್ ಗಳಿಸಿ ತಂಡವನ್ನು ಗೆಲುವು ದಡ ಸೇರಿಸಿದರು.
ಇದನ್ನೂ ಓದಿ : ಪಹಲ್ಗಾಮ್ನಲ್ಲಿ ಉಗ್ರರ ಅಟ್ಟಹಾಸಕ್ಕೆ ಇಬ್ಬರು ಕನ್ನಡಿಗರು ಸೇರಿ 28 ಮಂದಿ ಸಾವು!
