ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ ಪಾಕ್ ವಿರುದ್ಧ ತಿರುಗಿಬಿದ್ದಿರುವ ಭಾರತ, ಪಾಕಿಸ್ತಾನ ಸರ್ಕಾರದ ಎಕ್ಸ್ ಖಾತೆಯನ್ನು ಭಾರತದಲ್ಲಿ ಸ್ಥಗಿತಗೊಳಿಸಿದೆ. ಈಗಾಗಲೇ ಪಾಕಿಸ್ತಾನದ ಮೇಲೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿರುವ ಭಾರತ, ಪಾಕಿಸ್ತಾನದೊಂದಿಗಿನ ತನ್ನ ರಾಜತಾಂತ್ರಿಕ ಸಂಬಂಧವನ್ನು ತೀವ್ರವಾಗಿ ಕಡಿಮೆ ಮಾಡಿದೆ. ಭಾರತದಲ್ಲಿ ಪಾಕಿಸ್ತಾನ ಸರ್ಕಾರದ ಎಕ್ಸ್ ಅಕೌಂಟ್ ಬ್ಲಾಕ್ ಆಗಿರುವುದು ಸದ್ಯ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಇದರಿಂದ ಪಾಕಿಸ್ತಾನ ಅಕ್ಷರಶ: ಕಂಗಾಲಾಗಿದೆ.
ಬುಧವಾರ ನಡೆದ ಸಿಸಿಎಸ್ ಸಭೆಯಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ, ಸಿಂಧೂ ಜಲ ಒಪ್ಪಂದವನ್ನು ಅನಿರ್ದಿಷ್ಟಾವಧಿ ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇದೀಗ ಪಾಕ್ ಸರ್ಕಾರದ ಎಕ್ಸ್ ಖಾತೆಯನ್ನು ಭಾರತ ಸ್ಥಗಿತಗೊಳಿಸಿ ಪಾಕಿಸ್ತಾನಕ್ಕೆ ಶಾಕ್ ಕೊಟ್ಟಿದೆ.
ಪಾಕಿಸ್ತಾನಿ ಪ್ರಜೆಗಳಿಗೆ ಸಾರ್ಕ್ ವೀಸಾ ವಿನಾಯಿತಿ ಯೋಜನೆಯನ್ನು ಬುಧವಾರ ಭಾರತ ಸ್ಥಗಿತಗೊಳಿಸಿತ್ತು. ಇದರ ಅಡಿ ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಯಾವುದೇ ಅಸ್ತಿತ್ವದಲ್ಲಿರುವ ವೀಸಾಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್ ಪ್ರಜೆಗಳಿಗೆ ಸೂಚಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿರುವ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ನ್ನು ತಕ್ಷಣದಿಂದ ಮುಚ್ಚಲು ಆದೇಶಿಸಲಾಗಿದೆ.
ಇದನ್ನೂ ಓದಿ : ‘ಸೂತ್ರಧಾರಿ’ ಸಿನಿಮಾ ರಿಲೀಸ್ಗೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಚಿತ್ರತಂಡ!
