ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಐಟಿ ಸೆಲ್ ವಿರುದ್ಧ FIR!

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪ ಸಂಬಂಧ ಬಿಜೆಪಿ ಐಟಿ ಸೆಲ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ರಾಹುಲ್ ಗಾಂಧಿ ಹೊರದೇಶಕ್ಕೆ ಹೋದಾಗ ಪಹಲ್ಗಾಮ್​ನಲ್ಲಿ ಉಗ್ರರ ದಾಳಿ ನಡೆದಿರುತ್ತೆ‌. ರಾಹುಲ್ ಗಾಂಧಿ ಪ್ರತಿ ಬಾರಿ ವಿದೇಶಕ್ಕೆ ಹೋದಾಗ ಈ ರೀತಿಯ ಕೃತ್ಯಗಳು ನಡೆದಿರುತ್ತದೆ ಎಂದು ಬಿಜೆಪಿ ಐಟಿ ಸೆಲ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಆರೋಪ ಕೇಳಿಬಂದಿದೆ.

ಈ ಬಗ್ಗೆ ಕೆಪಿಸಿಸಿ ಕಾನೂನು ಘಟಕದ ಸಿ.ಎಂ ಧನಂಜಯ ಎಂಬವರು ದೂರು ದಾಖಲಿಸಿದ್ದಾರೆ. ‘ಸಮಾಜದಲ್ಲಿ ಶಾಂತಿ ಸೌಹಾರ್ದ ಹಾಳಾಗಿ, ಗುಂಪುಗಳ ನಡುವೆ ಘರ್ಷಣೆ ಉಂಟು ಮಾಡುವ ಉದ್ದೇಶ ಕೂಡಿರುತ್ತದೆ. ರಾಹುಲ್ ಗಾಂಧಿ ವಿರುದ್ಧ ಈ ರೀತಿ ಸುಳ್ಳು ಸುದ್ದಿ ಹರಡಿ ಅವರ ಘನತೆಗೆ ದಕ್ಕೆ ತರಲು ಯತ್ನಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನನ್ವಯ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಪಹಲ್ಗಾಮ್​ ದಾಳಿಗೆ ಪ್ರತೀಕಾರ – ಭಾರತದಲ್ಲಿ ಪಾಕ್‌ ಸರ್ಕಾರದ X ಖಾತೆ ಬ್ಲಾಕ್!​

Btv Kannada
Author: Btv Kannada

Read More