ಬೆಂಗಳೂರು : ಜ್ಯುವೆಲ್ಲರಿ ಮಾಲೀಕರಿಗೆ ಕೋಟಿ ಕೋಟಿ ಮೌಲ್ಯದ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ, ಐಶ್ವರ್ಯಾ ಹಾಗೂ ಶಿಲ್ಪಾಗೌಡಗೆ ED ಬಿಗ್ ಶಾಕ್ ಕೊಟ್ಟಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ಇಂದು ED ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸದ ಮೇಲೆ ದಾಳಿ ಮಾಡಿದ ED ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ವಿವೇಕಾನಂದ ಪಾರ್ಕ್ ಬಳಿಯಿರುವ ಶಿಲ್ಪಾಗೌಡ ನಿವಾಸದ ಮೇಲೂ ED ದಾಳಿ ನಡೆಸಿದೆ. ಶಿಲ್ಪಾಗೌಡ ಈ ಹಿಂದೆ ಐಶ್ವರ್ಯ ವಿರುದ್ಧ ವಂಚನೆ ಆರೋಪ ಮಾಡಿ ದೂರು ನೀಡಿದ್ದರು. ಇದೀಗ ಶಿಲ್ಪಾಗೌಡ ಮೇಲೂ ED ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಚಿನ್ನ ಹಾಗೂ ಕೆಲ ವ್ಯವಹಾರದಲ್ಲಿ ಐಶ್ವರ್ಯಾ ಗೌಡ ಹಾಗೂ ಶಿಲ್ಪಾ ಗೌಡ ಎಂಬುವವರು ವಂಚನೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ತನಿಖೆ ವೇಳೆ ಕೋಟ್ಯಾಂತರ ರೂಪಾಯಿ ವ್ಯವಹಾರ ನಡೆಸಿರುವುದು ಪತ್ತೆಯಾಗಿತ್ತು.
ಚಿನ್ನ ವಂಚನೆ ಪ್ರಕರಣದಲ್ಲಿ ಕೋಟ್ಯಾಂತರ ರೂಪಾಯಿ ಬೇನಾಮಿ ವ್ಯವಹಾರ ನಡೆಸಿದ್ದಾರೆ ಎಂದು ಪೊಲೀಸರು EDಗೆ (ಜಾರಿ ನಿರ್ದೇಶನಾಲಯ) ಮಾಹಿತಿ ನೀಡಿದ್ದರು. ಈ ಪೊಲೀಸರ ಮಾಹಿತಿ ಆಧರಿಸಿ ಇಸಿಐಆರ್ ದಾಖಲಿಸಿಕೊಂಡಿದ್ದ ED ಇಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಹಲವರ ಮನೆಯ ಮೇಲೆ ಇಡಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಇದನ್ನೂ ಓದಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಬಿಜೆಪಿ ಐಟಿ ಸೆಲ್ ವಿರುದ್ಧ FIR!
