ಇಂದಿನಿಂದ ಭಾರತ-ಇಂಗ್ಲೆಂಡ್ ಏಕದಿನ ಸರಣಿ.. ಪಂದ್ಯ ಎಷ್ಟು ಗಂಟೆಗೆ ಶುರು? ಲೈವ್​ ವೀಕ್ಷಿಸುವುದೇಗೆ? ಇಲ್ಲಿದೆ ಮಾಹಿತಿ!

5 ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು 1-4 ಅಂತರದಿಂದ ಸೋಲಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸಲು ಎದುರು ನೋಡುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಸೇರಿದಂತೆ ಹಲವು ಸ್ಟಾರ್ ಆಟಗಾರರು ಈ ಏಕದಿನ ಸರಣಿಯಲ್ಲಿ ಆಡುತ್ತಿದ್ದು, ಕಳೆದುಹೋದ ಫಾರ್ಮ್ ಅನ್ನು ಕಂಡುಕೊಳ್ಳುವ ಉದ್ದೇಶದಿಂದ ಮೈದಾನಕ್ಕೆ ಇಳಿಯಲಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ ದೃಷ್ಟಿಯಿಂದ ಈ ಸರಣಿ ಉಭಯ ತಂಡಗಳಿಗೂ ಅತೀ ಮುಖ್ಯವಾಗಿದ್ದು, ಎರಡು ತಂಡಗಳು ಗೆಲ್ಲುವ ಇರಾದೆಯೊಂದಿಗೆ ಕಣಕ್ಕಿಳಿಯುತ್ತಿವೆ. ಎರಡು ತಂಡಗಳ ಮೊದಲ ಪಂದ್ಯ ಇಂದಿನಿಂದ (ಫೆ.6) ಶುರುವಾಗಲಿದ್ದು, ಪಂದ್ಯದ ಬಗೆಗಿನ ಪೂರ್ಣ ಮಾಹಿತಿ ಇಲ್ಲಿದೆ.

ಭಾರತ-ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯವು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1:30 ಕ್ಕೆ ಆರಂಭವಾಗಲಿದ್ದು, ಅರ್ಧ ಗಂಟೆ ಮುಂಚಿತವಾಗಿ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಈ ಸರಣಿಯ ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ನೇರಪ್ರಸಾರ ವೀಕ್ಷಿಸಬಹುದು. ಇದಲ್ಲದೆ, ಎಲ್ಲಾ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರಲಿದೆ.

ಇದನ್ನೂ ಓದಿ : http://ಶಾಕಿಂಗ್ ಲುಕ್​ನಲ್ಲಿ ಸಮಂತಾ.. ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Btv Kannada
Author: Btv Kannada

Read More

Read More