ಉಗ್ರರು ಅಟ್ಟಹಾಸ ಮೆರೆದಿದ್ದ ಪಹಲ್ಗಾಮ್‌ಗೆ ರಾಹುಲ್​ ಗಾಂಧಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕ!

ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆದ 3 ದಿನಗಳ ಬಳಿಕ ಪಹಲ್ಗಾಮ್‌ಗೆ ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ. ಉಗ್ರರ ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.

ಗಾಯಾಳುಗಳ ಭೇಟಿಯ ಬಳಿಕ ಮಾತನಾಡಿದ ಅವರು, ಉಗ್ರರ ಈ ದಾಳಿಯ ಹಿಂದಿನ ಉದ್ದೇಶ ಸಮಾಜವನ್ನು ವಿಭಜಿಸುವುದು. ಇದು ಒಂದು ಭಯಾನಕ ದುರಂತ. ದಾಳಿಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಹಾಗೂ ದಾಳಿಯ ಕುರಿತ ಮಾಹಿತಿ ಪಡೆಯಲು ಆಗಮಿಸಿದ್ದೇನೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಜನರು ಹಾಗೂ ಇಡೀ ರಾಷ್ಟ್ರವೇ ಈ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮತ್ತು ಈ ಸಮಯದಲ್ಲಿ ರಾಷ್ಟ್ರವನ್ನು ಸಂಪೂರ್ಣವಾಗಿ ಬೆಂಬಲಿಸಿದೆ. ಗಾಯಗೊಂಡವರ ಆರೋಗ್ಯವನ್ನು ವಿಚಾರಿಸಿದ್ದೇನೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಪ್ರೀತಿ, ವಾತ್ಸಲ್ಯವಿದೆ. ಇಡೀ ರಾಷ್ಟ್ರವು ಒಗ್ಗಟ್ಟಿನಿಂದ ನಿಂತಿದೆ. ಕಾಂಗ್ರೆಸ್ ಪಕ್ಷವು ಈ ದಾಳಿಯನ್ನು ಖಂಡಿಸಿದೆ ಎಂದರು.

ಉಗ್ರರ ವಿರುದ್ಧ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಮ್ಮ ಬೆಂಬಲವಿದೆ. ಸಮಾಜವನ್ನು ವಿಭಜಿಸುವುದೇ ಉಗ್ರರ ಈ ದಾಳಿಯ ಹಿಂದಿನ ಉದ್ದೇಶ. ಉಗ್ರರ ಈ ಪ್ಲ್ಯಾನ್‌ ವಿಫಲಗೊಳಿಸಲು ಪ್ರತಿಯೊಬ್ಬ ಭಾರತೀಯನೂ ಒಗ್ಗಟ್ಟಿನಿಂದಿರುವುದು ಬಹಳ ಮುಖ್ಯ ಎಂದು ಹೇಳಿದರು.

ಇದನ್ನೂ ಓದಿ : ಜಿಗಿದು ಜಿಗಿದು ‘ಜೀನಿ’ ಹಿಂಡಿದ ಓನರ್ ದಿಲೀಪನ ಕಥೆ – BTVಯಲ್ಲಿ ಪ್ರಜ್ವಲ್ ರೇವಣ್ಣ ಮೀರಿಸೋ ಸೆಕ್ಸ್ ಸ್ಕ್ಯಾಂಡಲ್ ಇಂಚಿಂಚೂ ರಿವೀಲ್​!

 

Btv Kannada
Author: Btv Kannada

Read More