ಕಲಬುರಗಿ : ಕಾರು-ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಬಳಿ ನಡೆದಿದೆ. ಮಹೇಶ್ (32) ಪ್ರೇಮ್ ಕುಮಾರ್ (25) ಅನ್ನದಾನಯ್ಯ (25) ಮೃತರು.
ಸೇಡಂ ಕಡೆಯಿಂದ ಗುಂಡಗುರ್ತಿ ಕಡೆ ಹೋಗುತ್ತಿದ್ದ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ನಿತ್ಯಾನಂದ ಎಂಬುವರು ಗಂಭಿರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಾಹಿತಿ ಪ್ರಕಾರ, ಮೃತ ಮಹೇಶ್ (32) ಸಹೋದರನ ಮದುವೆ ಕಾರ್ಡ್ ಕೊಡಲು ಕಾರಿನಲ್ಲಿ ನಾಲ್ವರು ತೇರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸಂಬಂಧ
ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಪಹಲ್ಗಾಮ್‌ನಲ್ಲಿ ಹತ್ಯೆಯಾದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ – ಸರ್ಕಾರಿ ಉದ್ಯೋಗ ಘೋಷಣೆ!

Author: Btv Kannada
Post Views: 177