ಬೆಂಗಳೂರು : ರಾಜ್ಯದ ವಿವಿಧೆಡೆ ಇಂದಿನಿಂದ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಬೆಂಗಳೂರಿನಲ್ಲಿ ಬಿಸಿಲು ನೆತ್ತಿ ಸುಡುತ್ತಿದ್ರೆ ಜನರು ಸೆಕೆ ಸೆಕೆ ಎನ್ನುತ್ತಿದ್ದಾರೆ. ನಗರದಲ್ಲಿ ಒಣಹವೆಯ ವಾತಾವರಣ ಇದೇ ತಿಂಗಳಾಂತ್ಯಕ್ಕೆ ತಾತ್ಕಾಲಿಕವಾಗಿ ಕೊನೆಯಾಗಲಿದ್ದು, ಇಂದಿನಿಂದ ಒಂದು ವಾರಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ : ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹುಕ್ಕೇರಿ, ಕಾರ್ಕಳ, ಬೆಳಗಾವಿ, ನಿಪ್ಪಾಣಿ, ಕಮ್ಮರಡಿ, ಆನವಟ್ಟಿ, ಜಯಪುರ, ರಾಯ್ಭಾಗ್, ಧಾರವಾಡ, ಕಲಘಟಗಿ, ಬೈಲಹೊಂಗಲ, ಹಿಡಕಲ್, ಹುಬ್ಬಳ್ಳಿ, ಚಿಕ್ಕೋಡಿ, ನಾಪೋಕ್ಲು, ಶೃಂಗೇರಿಯಲ್ಲಿ ಈಗಾಗಲೇ ಮಳೆಯಾಗಲಿದೆ.
ಸಾರ್ವಜನಿಕ ಎಚ್ಚರಿಕೆ : ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಹಲವು ಎಚ್ಚರಿಕೆಗಳನ್ನು ನೀಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆಯಿಂದಾಗಿ ಪ್ರಯಾಣಿಕರು ಹವಾಮಾನ ವರದಿಗಳನ್ನು ನಿಯಮಿತವಾಗಿ ಪರಿಶೀಲಿಸಬೇಕು. ವಿದ್ಯುತ್ ತಂತಿಗಳು, ಮರಗಳು, ಮತ್ತು ದುರ್ಬಲ ರಚನೆಗಳಿಂದ ದೂರವಿರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಕೊಹ್ಲಿ-ಕೃನಲ್ ಆರ್ಭಟ.. ಡೆಲ್ಲಿ ವಿರುದ್ಧ ಸೇಡು ತೀರಿಸಿಕೊಂಡ RCB – ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಲಗ್ಗೆ!







