MLA ಮುನಿರತ್ನ ವಿರುದ್ಧ CIDಯಿಂದ ಚಾರ್ಜ್​ಶೀಟ್ ಸಲ್ಲಿಕೆ – ಅಶ್ಲೀಲ ಫೋಟೊ, ವಿಡಿಯೋ ಮಾಡಿರೋದು ಬಯಲು!

ಬೆಂಗಳೂರು : ಶಾಸಕ ಮುನಿರತ್ನ ಮೇಲಿನ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ CID ಅಧಿಕಾರಿಗಳು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಮುನಿರತ್ನ ಸೇರಿ 7 ಆರೋಪಿಗಳ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದ್ದು, ಒಟ್ಟು 3 ಸಾವಿರ ಪುಟಗಳ ಚಾರ್ಜ್​ಶೀಟ್​​ನಲ್ಲಿ ಮುನಿರತ್ನ, ಸುಧಾಕರ್, ಇನ್ಸ್​ಪೆಕ್ಟರ್ ಐಯ್ಯಣ್ಣ ರೆಡ್ಡಿ, ಲೋಹಿತ್ ಗೌಡ, ಶ್ರೀನಿವಾಸ್, ಕಿರಣ್ ಕುಮಾರ್, ಮಂಜುನಾಥ್ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

ಆರೋಪಿಗಳು ಪಿಐಗಳು, ಎಸಿಪಿಗಳ ಅಶ್ಲೀಲ ಫೋಟೋ, ವಿಡಿಯೋ ಮಾಡಿರುವುದು ಚಾರ್ಜ್​ಶೀಟ್​ನಿಂದ ಬಯಲಾಗಿದೆ. ತಮ್ಮ ಪರ ಕೆಲಸ ಮಾಡುವಂತೆ ಮಾಡಲು ಬ್ಲ್ಯಾಕ್​ಮೇಲ್ ಮಾಡಿದ ಬಗ್ಗೆಯೂ ಚಾರ್ಜ್​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. ನಾಯಕರ ಅಶ್ಲೀಲ ಫೋಟೋ ತೋರಿಸುವಂತೆ ಹೇಳಿರುವುದನ್ನೂ ಉಲ್ಲೇಖಿಸಲಾಗಿದೆ. HIV ಸೋಂಕಿತ ಸಂತ್ರಸ್ತೆ, ನೊಂದ ಮಹಿಳೆಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆಗಳನ್ನು ಪಡೆದಿದ್ದರು. ಜತೆಗೆ ಸಾಕ್ಷ್ಯಗಳ ಹೇಳಿಕೆಯನ್ನೂ ಪಡೆಯಲಾಗಿತ್ತು. ಶಾಸಕ ಮುನಿರತ್ನರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ವೇಳೆ ಬರೋಬ್ಬರಿ 63 ಪ್ರಶ್ನೆಗಳನ್ನು ಮುನಿರತ್ನ  ಮುಂದಿಡಲಾಗಿತ್ತು.

ಮುನಿರತ್ನ ವಿರುದ್ಧ ಐಪಿಸಿ ಕಲಂ 354(ಎ),354(ಸಿ), 376(2)(ಎನ್),308, 270,120ಬಿ,119,504,506,201,511, ರೆ/ವಿ 34 ಐಪಿಸಿ, ಕಲಂ 66ಇ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ : ಪಹಲ್ಗಾಮ್‌ ಉಗ್ರರ ದಾಳಿ ಪ್ರಕರಣ – ಮೃತ ಭರತ್ ಭೂಷಣ್ ಪತ್ನಿಯಿಂದ ಮಾಹಿತಿ ಪಡೆದ NIA!

Btv Kannada
Author: Btv Kannada

Read More