ನಮ್ಮ ಮೆಟ್ರೋದಲ್ಲಿ ತಿಂಡಿ ತಿಂದ ಯುವತಿ – ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ 500ರೂ. ದಂಡ!

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮಾದಾವರ ಮೆಟ್ರೋ ನಿಲ್ದಾಣದಿಂದ ಮಾಗಡಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಇಂದು ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 500 ರೂ. ದಂಡ ವಿಧಿಸಲಾಗಿದೆ.

ಏಪ್ರಿಲ್ 26, 2025 ರಂದು ಮೆಟ್ರೋದಲ್ಲಿ ಪ್ರಯಾಣಿಸುವಾಗ ಅವರು ಊಟ ಮಾಡುವ ಮೂಲಕ ಮೆಟ್ರೋ ನಿಯಮಗಳನ್ನು ಉಲ್ಲಂಘಿಸಿದ್ದರು, ಈ ಉಲ್ಲಂಘನೆಯನ್ನು ಸಹ ಪ್ರಯಾಣಿಕರೊಬ್ಬರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿ, ಬಿಎಂಆರ್‌ಸಿಎಲ್‌ಗೆ ದೂರು ನೀಡಿದ್ದರು. ಸೋಮವಾರ ಬೆಳಗ್ಗೆ ನೈಸ್ ರಸ್ತೆ ಜಂಕ್ಷನ್‌ನಲ್ಲಿರುವ ಮಾದಾವರ ಮೆಟ್ರೋ ನಿಲ್ದಾಣವನ್ನು ಪ್ರವೇಶಿಸಿದಾಗ ಯುವತಿಯನ್ನು ಗುರುತಿಸಿದ ಭದ್ರತಾ ಸಿಬ್ಬಂದಿ ಅವರಿಗೆ ದಂಡ ವಿಧಿಸಿದ್ದಾರೆ.

ಬೆಂಗಳೂರು ಮೆಟ್ರೋ ನಿಯಮಗಳಲ್ಲಿ ವಿವರಿಸಿದಂತೆ ಮೆಟ್ರೋ ಆವರಣದೊಳಗೆ ಮತ್ತು ರೈಲುಗಳಲ್ಲಿ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ನೀತಿಯು ಕಸ ಹಾಕುವುದನ್ನು ತಡೆಗಟ್ಟುವುದು, ನೈರ್ಮಲ್ಯವನ್ನು ಕಾಪಾಡುವುದು ಪ್ರಯಾಣಿಸುವ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಾಗಾಗಿ, ಎಲ್ಲ ಪ್ರಯಾಣಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಇದನ್ನೂ ಓದಿ : MLA ಮುನಿರತ್ನ ವಿರುದ್ಧ CIDಯಿಂದ ಚಾರ್ಜ್​ಶೀಟ್ ಸಲ್ಲಿಕೆ – ಅಶ್ಲೀಲ ಫೋಟೊ, ವಿಡಿಯೋ ಮಾಡಿರೋದು ಬಯಲು!

Btv Kannada
Author: Btv Kannada

Read More