ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದವರ ಕಾರು ಅಪಘಾತ – ಸ್ಥಳದಲ್ಲೇ ಐವರ ಸಾವು!

ಬೆಂಗಳೂರು : ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇದನ್ನೂ ಓದಿ : ಯೂಟ್ಯೂಬ್‌ ಇಂಡಿಯಾದ ಎಂಡಿಯಾಗಿ ಗುಂಜನ್ ಸೋನಿ ನೇಮಕ!

Btv Kannada
Author: Btv Kannada

Read More