ಸಾಲ ವಸೂಲಿಗೆ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಬಾಲಕಿ ಮೇಲೆ ಅತ್ಯಾಚಾರ ಯತ್ನ – ಆರೋಪಿ ಅರೆಸ್ಟ್​!

ತುಮಕೂರು : ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊಸ ಕಾನೂನುಗಳನ್ನು ಜಾರಿಗೆ  ತಂದಿದೆ. ಮಾತ್ರವಲ್ಲ ಹಣ ವಸೂಲಿಗೆ ಸಂಬಂಧಿಸಿದಂತೆ ಸಿಬ್ಬಂದಿಗಳು ಕೆಲವು ನಿಯಮಗಳನ್ನು ಅನುಸರಿಸುವಂತೆಯೂ ಸೂಚನೆ ನೀಡಲಾಗಿದೆ. ಆದ್ರೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಣ ವಸೂಲಿ ನೆಪದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಆರೋಪ ಹಂದನಕರೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿ ಬಂದಿದೆ.

ಹೌದು.. ತುಮಕೂರಿನ ಹಂದನಕರೆ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೈಕ್ರೊ ಫೈನಾನ್ಸ್ ಸಿಬ್ಬಂದಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಸಾಲ ವಸೂಲಾತಿ ನೆಪದಲ್ಲಿ ಮನೆಗೆ ಬಂದ ಮೈಕ್ರೋಫೈನಾನ್ಸ್ ಸಿಬ್ಬಂದಿ ಅಪ್ರಾಪ್ತೆ ಮೇಲೆ ಎರಗಿದ್ದಾನೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರಣ್ ಎಂಬಾತನಿಂದ ಈ ಪೈಶಾಚಿಕ ಕೃತ್ಯ ನಡೆದಿದೆ ಎಂಬ ಗಂಭೀರ ಆರೋಪ ಮಾಡಲಾಗಿದೆ.

ಇನ್ನೂ, ಈ ಘಟನೆ ಏಪ್ರಿಲ್ 24ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಾಲ ವಸೂಲಿಗೆ ಹೋದ ವೇಳೆ ಬಾಲಕಿ ಒಬ್ಬಳೆ ಮನೆಯಲ್ಲಿ ಇದ್ದದ್ದನ್ನ ಕಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದ್ದು, ಅತ್ಯಾಚಾರ ವಿರೋಧಿಸಿ ಬಾಲಕಿ ಕಿರುಚಾಡಿದಾಗ ಬಾಲಕಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಬಾಲಕಿಯ ಕುತ್ತಿಗೆ ಭುಜ ಸೇರಿದಂತೆ ವಿವಿಧ ಕಡೆ ಗಾಯಗೊಳಿಸಿರುವ ಕೀಚಕ, ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಆರೋಪಿ ಕಿರಣ್ ಬಂಧಿಸಿದ ಪೊಲೀಸರು : ಸದ್ಯ ಆರೋಪಿ ಕಿರಣ್‌ನನ್ನು ಪೊಲೀಸರು ಬಂಧಿಸಿದ್ದು, ಜೈಲಿಗಟ್ಟಿದ್ದಾರೆ. ಎರಡೇ ದಿನದಲ್ಲಿ ಆರೋಪಿಯನ್ನ ಹಂದನಕೆರೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರಣ್ ವಿರುದ್ಧ ಹಂದನಕರೆ‌ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಧಾರವಾಡ : ಮನೆ ಮುಂದೆ ಕೂತಿದ್ದ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ – ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

 

Btv Kannada
Author: Btv Kannada

Read More