ಚಿಕ್ಕಬಳ್ಳಾಪುರ : ರಸ್ತೆ ಅಪಘಾತದಲ್ಲಿ ಕರ್ನಾಟಕ ರಾಜ್ಯ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಬಿ.ಚನ್ನಕೃಷ್ಣಪ್ಪ ಅವರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ಸಮೀಪ ನಡೆದಿದೆ. ಗುಡಿಬಂಡೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ವರ್ಲಕೊಂಡ ಬಳಿ ಚಕ್ರ ಸಿಡಿದು ಕಾರು ಪಲ್ಟಿಯಾದ ಪರಿಣಾಮ ಚನ್ನಕೃಷ್ಣಪ್ಪ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟಿದ್ದಾರೆ.
ಬಾಗೇಪಲ್ಲಿಗೆ ಹೋಗಿ ವಾಪಸ್ ಬೆಂಗಳೂರಿಗೆ ಬರುವ ವೇಳೆ ದುರ್ಘಟನೆ ನಡೆದಿದೆ. ಇನ್ನು ಕಾರು ಚಲಾಯಿಸುತ್ತಿದ್ದ ಚನ್ನಕೃಷ್ಣಪ್ಪ ಸ್ನೇಹಿತರಾಗಿದ್ದ ವಕೀಲರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ದಳಸಗೆರೆ ಮೂಲದ ಬಿ.ಚನ್ನಕೃಷ್ಣಪ್ಪ ಸುಮಾರು 35 ವರ್ಷಕ್ಕೂ ಹೆಚ್ಚು ಕಾಲ ದಲಿತ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
ಇನ್ನು ಘಟನಾ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನೆ ಸಂಬಂಧ ಮೃತ ಚೆನ್ನಕೃಷ್ಣಪ್ಪ ಅವರ ಮಗ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ಇದನ್ನೂ ಓದಿ : ಟ್ರೆಕ್ಕಿಂಗ್ ಪ್ರಿಯರಿಗೆ ಗುಡ್ ನ್ಯೂಸ್ – ಇಂದಿನಿಂದ ಕುದುರೆಮುಖದ ನೇತ್ರಾವತಿ ಪೀಕ್ ಓಪನ್.. ಟಿಕೆಟ್ ಬುಕ್ ಮಾಡೋದೇಗೆ?
