ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಾಳೆ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನಾಳೆ ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.
ಫಲಿತಾಂಶವನ್ನು ನಾಳೆ ಮಧ್ಯಾಹ್ನ 12.30ರ ನಂತರ ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.
ಆನ್ಲೈನ್ನಲ್ಲಿ ನೋಡುವುದು ಹೇಗೆ?
- karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.
ಇದನ್ನೂ ಓದಿ : ನೆಲಮಂಗಲದಲ್ಲಿ ಸಿಲಿಂಡರ್ ಬ್ಲಾಸ್ಟ್ – ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ!

Author: Btv Kannada
Post Views: 897