ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ!

ಬೆಂಗಳೂರು :ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ನಿಟ್ಟಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ರವಾನಿಸಿದ್ದಾರೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ.

ರಾಜೀನಾಮೆ ಪತ್ರದಲ್ಲಿ ಏನಿದೆ?

ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ ಯತ್ನಾಳ್ ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ಹಾಗಾಗಿ ನಾನು ಅವರ ಸವಾಲನ್ನು ಸ್ವೀಕರಿಸಿ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ.

ಆದುದರಿಂದ, ಯತ್ನಾಳ್ ರವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ಕೋರಿದ್ದೇನೆ.

ಇದನ್ನೂ ಓದಿ : SSLC ಫಲಿತಾಂಶ – ರಾಜ್ಯದ 22 ವಿದ್ಯಾರ್ಥಿಗಳಿಗೆ ಔಟ್​ ಆಫ್​ ಔಟ್!

Btv Kannada
Author: Btv Kannada

Read More