ಬೆಂಗಳೂರು : ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರ ಅಕಾಡೆಮಿ (IIFA) ವತಿಯಿಂದ ಉತ್ಸವ ಹಾಗೂ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಈ ಸಂಬಂಧ ಚರ್ಚಿಸಲು ಐಫಾ ಪ್ರತಿನಿಧಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸಭೆ ನಡೆಸಿದ್ದಾರೆ.

ಈ ಉತ್ಸವ ಆಯೋಜನೆಯಿಂದ ಕರ್ನಾಟಕವು ಮನರಂಜನಾ ಕ್ಷೇತ್ರದಲ್ಲಿ ಜಾಗತಿಕವಾಗಿ ಇನ್ನಷ್ಟು ಪ್ರಚಾರಗೊಳ್ಳುವುದರ ಜೊತೆಗೆ, ಮತ್ತಷ್ಟು ಆರ್ಥಿಕ ಬೆಳವಣಿಗೆಗೆ ತೆರೆದುಕೊಳ್ಳಲಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಗವರ್ನರ್ ಥಾವರ್ ಚಂದ್ ಗೆಹ್ಲೋಟ್ ಕನ್ನಡ ಪ್ರೀತಿ – ರಾಜ್ಯಪಾಲರ ಕನ್ನಡ ಭಾಷೆ ಕಲಿಕೆ ಬಗ್ಗೆ ಶಾಸಕ ಸುರೇಶ್ ಕುಮಾರ್ ಸಂಭ್ರಮ!
Author: Btv Kannada
Post Views: 411







