KSRTC ಬಸ್-ಆಟೋ ನಡುವೆ ಭೀಕರ ಅಪಘಾತ – ಒಂದೇ ಕುಟುಂಬದ ಮೂವರು ಸಾವು!

ನೆಲಮಂಗಲ : ಆಟೋಗೆ KSRTC ಬಸ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯ ಶಾಂತಿನಗರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 75 ಕುಣಿಗಲ್ ರಸ್ತೆಯ ನೆಲಮಂಗಲದ ಮಲ್ಲರಬಾಣವಾಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ತಾಲ್ಲೂಕಿನ ಶಾಂತಿನಗರ ನಿವಾಸಿ ಹಾಗೂ ಆಟೋ ಚಾಲಕ ಶ್ರೀನಿವಾಸ್‌ (45), ಪುಟ್ಟಮ್ಮ (55), 13 ವರ್ಷದ ಬಾಲಕಿ ಮೃತರು. ಗಂಭೀರ ಗಾಯಗೊಂಡಿರುವ ವೆಂಕಟೇಶ್ (37), ನಾಗರತ್ನಮ್ಮ (38), 11 ವರ್ಷದ ಬಾಲಕಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ಶ್ರೀನಿವಾಸ್ ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿ ನೌಕರನಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದ ಆರು ಜನ ಆಟೋದಲ್ಲಿ ಶಾಂತಿನಗರದಿಂದ ನೆಲಮಂಗಲ ನಗರಕ್ಕೆ ಬರುತ್ತಿದ್ದರು ಎನ್ನಲಾಗಿದ್ದು, ಆಟೋ ಚಾಲಕನ ಅಜಾಗರೂಕ ಚಾಲನೆಯಿಂದ ಅವಘಡ ನಡೆದಿದೆ. ಸ್ಥಳಕ್ಕೆ ಬಂದ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : “ಸೆಪ್ಟೆಂಬರ್‌ 21” ಚಿತ್ರದ ಮೂಲಕ ನಟಿ ಪ್ರಿಯಾಂಕಾ ಉಪೇಂದ್ರ ಬಾಲಿವುಡ್‌ಗೆ ಎಂಟ್ರಿ!

Btv Kannada
Author: Btv Kannada

Read More