ಸತ್ತೇಗಾಲ ಡ್ಯಾಂನಿಂದ ರಾಮನಗರಕ್ಕೆ ಕುಡಿಯುವ ನೀರು.. ಯೋಜನೆಗೆ ಅಡಿಗಲ್ಲು ಹಾಕಿದ ಡಿಸಿಎಂ ಡಿಕೆಶಿ!

ಮಂಡ್ಯ : ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಸಮೀಪದ ಸತ್ತೇಗಾಲ ಕಾವೇರಿ ನದಿ ಅಣೆಕಟ್ಟಿನಿಂದ ರಾಮನಗರ ಜಿಲ್ಲೆಯ ನಾನಾ ಕಡೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಗೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿ, ಸ್ಥಳ ಪರಿಶೀಲನೆ ನಡೆಸಿದರು.
ಯೋಜನೆ ಗುದ್ದಲಿ ಪೂಜೆಗೂ ಮೊದಲು ಡಿಸಿಎಂ ಡಿಕೆಶಿ ಅವರು ಹಿರೇನಾಗರದಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ನಿಕಟಪೂರ್ವ ಸಂಸದರಾದ ಡಿ.ಕೆ.ಸುರೇಶ್, ಚೆನ್ನಪಟ್ಟಣ ಶಾಸಕರಾದ ಸಿ.ಪಿ.ಯೋಗೇಶ್ವರ್, ಉದಯ್ ಕದಲೂರು, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಸುಧಾಮ್ ದಾಸ್, ಮಾಜಿ ಶಾಸಕ ಅಶ್ವಥ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

 

ಇದನ್ನೂ ಓದಿ : ರಾಜ್ಯದಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ!

Btv Kannada
Author: Btv Kannada

Read More