ಮೇ.9ಕ್ಕೆ ಸುಮಂತ್ ಶೈಲೇಂದ್ರ ನಟನೆಯ “ಚೇಸರ್” ಚಿತ್ರದ ಸಾಂಗ್ ರಿಲೀಸ್!

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯರಾಗಿರುವ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸಿರುವ “ಚೇಸರ್” ಚಿತ್ರ ಟೀಸರ್ ಮೂಲಕ ಈಗಾಗಲೇ ಜನಪ್ರಿಯವಾಗಿದೆ. ಈ ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣ ಮಾಡಿದ್ದು, “ಬುದ್ದಿವಂತ ೨” ಚಿತ್ರದ ಖ್ಯಾತಿಯ ಜಯರಾಮ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಅನಾವರಣ ಸಮಾರಂಭ ಮೇ 9 ರಂದು ಸಂಜೆ 7.30 ಕ್ಕೆ ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಅರಗ ಜ್ಞಾನೇಂದ್ರ, ಶಾಸಕ ಎಸ್ ಎನ್ ಚನ್ನಬಸಪ್ಪ‌, ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ಬಿ ವಿ ಶ್ರೀನಿವಾಸ್ ಹಾಗೂ ಖ್ಯಾತ ನಿರ್ದೇಶಕ ಆರ್ ಚಂದ್ರು ಸೇರಿದಂತೆ ಅನೇಕ ರಾಜಕೀಯ ಹಾಗೂ ಚಿತ್ರರಂಗದ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಲವ್ ಜಾನರ್ ಜೊತೆಗೆ ಸಸ್ಪೆನ್ಸ್ ವಿತ್ ಆಕ್ಷನ್ ಕಥಾಹಂದರವನ್ನೂ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಜಯರಾಮ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.

ಸುಮಂತ್ ಶೈಲೇಂದ್ರ ಅವರಿಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ರವಿಶಂಕರ್, ರಂಗಾಯಣ ರಘು, ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ಕಡಿಪುಡಿ ಚಂದ್ರು, ಸಂಗೀತ ಮುಂತಾದವರು “ಚೇಸರ್” ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ : BBMP ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿ, ಮಳೆ ಸಂಬಂಧ ಮುನ್ನೆಚ್ಚರಿಕಾ ಕ್ರಮ – ತುಷಾರ್ ಗಿರಿನಾಥ್​ ಜೊತೆ ಕಮಿಷನರ್ ಮಹೇಶ್ವರ ರಾವ್ ಚರ್ಚೆ!

Btv Kannada
Author: Btv Kannada

Read More