ಬೆಂಗಳೂರು : ಆರೋಪಿಗಳ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಲು 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದ ಕೆಂಪೇಗೌಡನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶಿವಾಜಿ ರಾವ್ ಮತ್ತು ಸಬ್ ಇನ್ಸ್ಪೆಕ್ಟರ್ ಶಿವಾನಂದ ಜಿ. ಅವರು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುಂಗಡವಾಗಿ 1 ಲಕ್ಷ ರೂ. ಪಡೆಯುವಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತಕ್ಕೆ ಟ್ರ್ಯಾಪ್ ಆಗಿದ್ದಾರೆ.
ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದರಲ್ಲಿ, ಅವರ ಹೆಸರನ್ನು ಕೈಬಿಡಲು ಪಿಐ ಶಿವಾಜಿ ರಾವ್ ಮತ್ತು ಪಿಎಸ್‌ಐ ಶಿವಾನಂದ ಜಿ. ಅವರು 6 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಕೇಶವಮೂರ್ತಿ ಅವರು ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಡಿವೈಎಸ್‌ಪಿ ಗಿರೀಶ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ರೂಪಿಸಲಾಗಿತ್ತು. ಲೋಕಾಯುಕ್ತ ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿಯಲ್ಲೇ PI ಮತ್ತು PSI 1 ಲಕ್ಷ ರೂ. ಲಕ್ಷ ನೀಡಿದ್ದರು. ಈ ವೇಳೆಯೇ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಿದರು. 1 ಲಕ್ಷ ರೂ. ವಶಕ್ಕೆ ಪಡೆದುಕೊಂಡಿದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ವಿಧಾನಸಭೆಯಲ್ಲಿ ಪ್ರಶ್ನೆ ಕೇಳದಿರಲು ಲಂಚಕ್ಕೆ ಬೇಡಿಕೆ – 20 ಲಕ್ಷ ರೂ. ಪಡೆಯುತ್ತಿದ್ದಾಗಲೇ ಶಾಸಕ ಅರೆಸ್ಟ್!
