ರಮೇಶ್ ಅರವಿಂದ್ ನಟನೆಯ “ದೈಜಿ” ಚಿತ್ರತಂಡಕ್ಕೆ ದಿಗಂತ್ ಸೇರ್ಪಡೆ!

ದೈಜಿ ಚಿತ್ರ ರಮೇಶ್ ಅರವಿಂದ್ ಅವರ 106ನೇ ಚಿತ್ರವಾಗಿದ್ದು, ಈ ಸಿನಿಮಾವನ್ನು ಶಿವಾಜಿ ಸುರತ್ಕಲ್ ಖ್ಯಾತಿಯ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ. ಇದರ ತಾರಾಗಣ ಬಳಗದಲ್ಲಿ ರಾಧಿಕಾ ನಾರಾಯಣ್, ಅವಿನಾಶ್ ಇತ್ಯಾದಿ ನಟರು ಕಾಣಿಸಿಕೊಳ್ಳಲಿದ್ದಾರೆ.

ಹೊಸ ವಿಷಯ ಏನೆಂದರೆ ಗಾಳಿಪಟ ಖ್ಯಾತಿಯ ದಿಗಂತ್ ದೈಜಿ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದು, ಇವರು ರಮೇಶ್ ಅರವಿಂದ್ ಅವರ ತಮ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಭಿನ್ನ ರೀತಿಯ ಪಾತ್ರದಲ್ಲಿ ಇವರಿಬ್ಬರು ಜೊತೆಯಾಗಿ ಮೋಡಿ ಮಾಡಲಿದ್ದಾರೆ. ರಮೇಶ್ ಅರವಿಂದ್ ಅವರು ಸೂರ್ಯ ಪಾತ್ರದಲ್ಲಿ, ರಾಧಿಕಾ ನಾರಾಯಣ್ ಅವರು ಭೂಮಿ ಪಾತ್ರದಲ್ಲಿ, ದಿಗಂತ್ ಅವರು ಗಗನ್ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಶೇಕಡ 50ರಷ್ಟು ಚಿತ್ರೀಕರಣ ಮುಕ್ತಾಯಗೊಂಡಿದೆ.

ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇನ್ನು ಸಿನಿಮಾದ ಛಾಯಾಗ್ರಹಣ ಶ್ರೀಶಾ ಕುದುವಳ್ಳಿ ಅವರು ಮಾಡುತ್ತಿದ್ದಾರೆ.

ಇದನ್ನೂ ಓದಿ : ಸೆಟ್ಟೇರಿತು “ಸರ್ಕಾರಿ ನ್ಯಾಯಬೆಲೆ ಅಂಗಡಿ” ಸಿನಿಮಾ – ಹಳ್ಳಿ ಹುಡುಗಿಯ ಗೆಟಪ್‌ನಲ್ಲಿ ತುಪ್ಪದ ಬೆಡಗಿ!

Btv Kannada
Author: Btv Kannada

Read More