ಸುಹಾಸ್ ಹತ್ಯೆಯಲ್ಲಿ ಮುಸ್ಲಿಂ ಹೆಡ್‌ ಕಾನ್ಸ್‌ಟೇಬಲ್ ಭಾಗಿಯಾಗಿದ್ದಾರೆಂದು ಅವಹೇಳನ – ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ FIR!

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಪೋಲಿಸ್ ಠಾಣೆಯ ಹೆಡ್‌ ಕಾನ್ಸ್‌ಟೇಬಲ್ ರಶೀದ್ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನ ಮಾಡಿ ಪೋಸ್ಟ್ ಹಾಕಿದ್ದ ಹಾಗೂ ಹೇಳಿಕೆ ನೀಡಿದ್ದ ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹಿಂದೂ ಕಾರ್ಯಕರ್ತ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ ಹಾಗೂ ಹಿಂದೂ ಜಾಗರಣ ವೇದಿಕೆ ಪ್ರಾಂತ ಸಂಚಾಲಕ ಉಲ್ಲಾಸ್ ಕೆ.ಟಿ ವಿರುದ್ಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಬಜಪೆ ಠಾಣೆಯ ಹೆಡ್‌ ಕಾನ್ಸ್‌ಟೇಬಲ್ ಕೈವಾಡ ಇದೆ. ಯಾವಾಗ ಬಂಧನ ಎಂದು ಸಮಿತ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಅಲ್ಲದೇ, ಹತ್ಯೆಯಲ್ಲಿ ಬಜಪೆ ಠಾಣಾ ಹೆಡ್‌ ಕಾನ್ಸ್‌ಟೇಬಲ್ ರಶೀದ್ ಪರೋಕ್ಷವಾಗಿ ಕೈ ಜೋಡಿಸಿದ್ದಾರೆ. ‘ಸುಹಾಸ್ ಶೆಟ್ಟಿಗೆ ರಶೀದ್ ಬಹಳಷ್ಟು ಟಾರ್ಚರ್ ಕೊಡುತ್ತಿದ್ದರು. ಕೊಲೆಯಾಗುವ ಮೂರು ದಿನಗಳ ಹಿಂದಷ್ಟೇ ಶಸ್ತ್ರಾಸ್ತ್ರ ತೆಗೆಸಿದ್ದರು. ಆ ಸುದ್ದಿ ಆರೋಪಿಗಳಿಗೆ ಹೇಗೆ ಗೊತ್ತಾಯಿತು? ಈ ಬಲವಾದ ಮಾಹಿತಿಯನ್ನು ರಶೀದ್ ಆರೋಪಿಗಳಿಗೆ ನೀಡಿರಬೇಕು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ಕೆಟಿ ಉಲ್ಲಾಸ್ ಆರೋಪ ಮಾಡಿದ್ದರು.

ಹೀಗಾಗಿ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್‌ ಕಾನ್ಸ್‌ಟೇಬಲ್ ರಶೀದ್ ಅವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಈ ದೂರಿನನ್ವಯ ಪೊಲೀಸರು ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಪಾಕ್‌ ಉಗ್ರರ 9 ನೆಲೆಗಳ ಮೇಲೆ ಭಾರತ ಏರ್‌ಸ್ಟ್ರೈಕ್‌ – ‘ಆಪರೇಷನ್ ಸಿಂಧೂರ’ಕ್ಕೆ 70ಕ್ಕೂ ಹೆಚ್ಚು ಭಯೋತ್ಪಾದಕರು ಉಡೀಸ್!

Btv Kannada
Author: Btv Kannada

Read More