ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಭಾರತದ ಮಾಸ್ಟರ್ ಸ್ಟ್ರೋಕ್ಗೆ 100ಕ್ಕೂ ಹೆಚ್ಚು ಉಗ್ರರು ಹತರಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಇನ್ನು, ಮಿಡ್‌ನೈಟ್ ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ. ಹೌದು.. ಚೀನಾ ನಿರ್ಮಿತ ಜೆಎಫ್-17 ಯುದ್ಧ ವಿಮಾನ ಭಾರತದ ದಾಳಿಯನ್ನು ತಡೆಯಲು ಬಂದಿತ್ತು. ಈ ಸಂದರ್ಭದಲ್ಲಿ ಭಾರತ ಕ್ಷಿಪಣಿಯನ್ನು ಹಾರಿಸಿ ಜೆಎಫ್-17 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತೀಯ ವಾಯುಪಡೆಯ ದಾಳಿಗೆ JF-17 ನೆಲಕ್ಕಪ್ಪಳಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಭಯೋತ್ಪಾದಕ ದಾಳಿಗೆ ಪ್ರತೀಕಾರ : ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 26 ಮಂದಿ ಪ್ರವಾಸಿಗರು ಪ್ರಾಣ ಕಳೆದುಕೊಂಡಿದ್ದಾರೆ. ಭಾರತವು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ- ತೈಯ್ಬಾ (ಎಲ್‌ಇಟಿ)ಗೆ ಸಂಬಂಧವಿರುವ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್‌ಎಫ್) ಎಂಬ ಗುಂಪು ಕಾರಣ ಎಂದು ಹೇಳಿತ್ತು. ಭಯೋತ್ಪಾದಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತ ಹೇಳಿತ್ತು. ಅಂತೆಯೇ ಇಂದು ರಾತ್ರಿಯಿಂದ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಆರಂಭಿಸಿದೆ. ಈ ಆಪರೇಷನ್ ಸಿಂಧೂರದಲ್ಲಿ ಭಾರತೀಯ ಭೂಸೇನೆ ಹಾಗೂ ವಾಯುಸೇನೆ ಜಂಟಿಯಾಗಿದೆ ನಡೆಸುತ್ತಿವೆ.
