ಇಡೀ ದೇಶಕ್ಕೆ ಹೆಮ್ಮೆಯ ಕ್ಷಣ – ಆಪರೇಷನ್ ಸಿಂಧೂರ ಬಗ್ಗೆ ಪ್ರಧಾನಿ ಮೋದಿ ಫಸ್ಟ್ ರಿಯಾಕ್ಷನ್!

ನವದೆಹಲಿ : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ್’ ಮೂಲಕ ಪಾಕ್​ ಉಗ್ರರಿಗೆ ತಿರುಗೇಟು ನೀಡಿದ್ದು, ಪಾಕಿಸ್ತಾನ ಹಾಗೂ ಪಿಒಕೆ ಒಳಗೆ ಇದ್ದ 9 ಉಗ್ರರ ನೆಲೆಗಳನ್ನು ನಾಶಪಡಿಸಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸೇನೆ ಆರಂಭಿಸಿದ ಆಪರೇಷನ್ ಸಿಂಧೂರ್ ಬಗ್ಗೆ ತಮ್ಮ ಸಂಪುಟ ಸಭೆಯಲ್ಲಿ ಮೊದಲ ಹೇಳಿಕೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ. ಇದು ನಮಗೆ ಹೆಮ್ಮೆಯ ಕ್ಷಣ ಎಂದು ಸೇನೆಯನ್ನು ಶ್ಲಾಘಿಸಿದರು.

ಇದಾದ ನಂತರ, ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ತಮ್ಮ ನಂಬಿಕೆಯನ್ನು ವ್ಯಕ್ತಪಡಿಸಿದರು ಮತ್ತು ಇಡೀ ದೇಶವು ಅವರೊಂದಿಗಿದೆ ಎಂದು ಹೇಳಿದರು.

ಸಂಪುಟ ಸಭೆಯಲ್ಲಿದ್ದ ಎಲ್ಲರಿಗೂ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯಲ್ಲಿ ಭಾರತವು ಪಾಕಿಸ್ತಾನದಲ್ಲಿರುವ ಒಟ್ಟು ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿತು, ಇದರಲ್ಲಿ ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೊಯ್ಬಾ ಪ್ರಧಾನ ಕಚೇರಿ, ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಲಾಂಚ್ ಪ್ಯಾಡ್ ಮತ್ತು ಇತರ ಸ್ಥಳಗಳು ಸೇರಿವೆ. ಇದರಲ್ಲಿ ಕನಿಷ್ಠ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಬೆಂಗಳೂರಿಗರೇ ಅಲರ್ಟ್​.. ಇಂದು ಸಿಲಿಕಾನ್​ ಸಿಟಿಯಲ್ಲಿ ಮೊಳಗಲಿದೆ ಯುದ್ಧದ ಸೈರನ್‌ – 32 ಕಡೆ ಮಾಕ್‌ ಡ್ರಿಲ್‌, ಎಲ್ಲೆಲ್ಲಿ?

Btv Kannada
Author: Btv Kannada

Read More