ಕೋಲ್ಕತ್ತಾ : ಐಪಿಎಲ್ 2025 ಆವೃತ್ತಿಯಿಂದ ಈಗಾಗಲೇ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬುಧವಾರದ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಪ್ಲೇ-ಆಫ್ ಆಸೆ ಹೊತ್ತಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಕನಸನ್ನು ಧೋನಿ ಪಡೆ ಭಗ್ನಗೊಳಿಸಿದೆ.
ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಎಂ.ಎಸ್.ಧೋನಿ ಪಡೆ ಕೋಲ್ಕತ್ತಾ ವಿರುದ್ಧ 2 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಹಾನೆ ಪಡೆ 20 ಓವರ್‌ಗೆ 6 ವಿಕೆಟ್ ನಷ್ಟಕ್ಕೆ 179 ರನ್ ಕಲೆ ಹಾಕಿತು.
ಈ ಗುರಿ ಬೆನ್ನಟ್ಟಿದ್ದ ಸಿಎಸ್‌ಕೆ 19.4 ಓವರ್‌ಗೆ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಗೆಲುವು ದಾಖಲಿಸಿತು. ಆ ಮೂಲಕ ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಒಟ್ಟಾರೆ ಈ ಟೂರ್ನಿಯಲ್ಲಿ ಮೂರನೇ ಗೆಲುವು ದಾಖಲಿಸಿದಂತಾಯಿತು.
ಸದ್ಯ ಐಪಿಎಲ್ ಪಾಯಿಂಟ್ಸ್ ಟೇಬಲ್‌ನಲ್ಲಿ KKR 6ನೇ ಸ್ಥಾನದಲ್ಲಿದೆ. 5 ಪಂದ್ಯ ಗೆದ್ದು 5 ಪಂದ್ಯ ಸೋತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಚೆನ್ನೈ ವಿರುದ್ಧ ಸೋಲಿನಿಂದ ಪ್ಲೇ ಆಫ್ ಹಾದಿ ಬಹಳ ಕಷ್ಟವಾಗಿದೆ.
ಇದನ್ನೂ ಓದಿ : 20 ವರ್ಷಗಳ ಬಳಿಕ ಮೇ.23ಕ್ಕೆ AMR ರಮೇಶ್ ನಿರ್ದೇಶನದ “ಸೈನೈಡ್” ಚಿತ್ರ ರೀ-ರಿಲೀಸ್!
