ವಿಜಯಪುರ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದ ಹಲವೆಡೆ ಸಚಿವ ಸಂಪುಟ ಸಭೆಗಳನ್ನು ಆಯೋಜಿಸುವ ಮೂಲಕ ಇಡೀ ರಾಜ್ಯಾದ್ಯಂತ ಎಲ್ಲಾ ಭಾಗಗಳಲ್ಲೂ ಅಭಿವೃದ್ಧಿ ಯೋಜನೆಗಳಿಗೆ ಮುಂದಾಗಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಗಡಿ ಜಿಲ್ಲೆ ಚಾಮರಾಜನಗರ ಬಳಿಕ ಇದೀಗ ‘ಪಂಚ ನದಿಗಳ ನಾಡು’ ವಿಜಯಪುರ ಜಿಲ್ಲೆಯಲ್ಲೂ ಮುಂದಿನ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ವಿಜಯಪುರ ಉಸ್ತುವಾರಿ ಸಚಿವ ಹಾಗೂ ಕೈಗಾರಿಕಾ ಸಚಿವರಾಗಿರುವ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಸಿದ್ದತೆಗಳು ನಡೆಯುತ್ತಿವೆ.
ವಿಜಯಪುರ ಜಿಲ್ಲೆಯ ಪ್ರಗತಿಗೋಸ್ಕರ ಶೀಘ್ರದಲ್ಲೇ ಸಚಿವ ಸಂಪುಟ ಸಭೆ ಜರುಗಲಿರುವ ಹಿನ್ನಲೆ ಇಂದು ಜಿಲ್ಲಾಧಿಕಾರಿಗಳಾದ ಶ್ರೀ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಸಿಇಒ ಶ್ರೀ ರಿಷಿ ಆನಂದ್ ಅವರೊಂದಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಚರ್ಚಿಸಿದ್ದಾರೆ. ಈ ಕುರಿತು ಎಂ.ಬಿ. ಪಾಟೀಲ್ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಟೋಗಳನ್ನು ಶೇರ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ‘ಆಪರೇಷನ್ ಸಿಂಧೂರ’ ಯಶಸ್ವಿ – ಯೋಧರ ಒಳಿತಿಗಾಗಿ ರಾಜ್ಯದ ಎಲ್ಲಾ ಮುಜುರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ!
