ಹಾವೇರಿಯಲ್ಲಿ ಭೀಕರ ಅಪಘಾತ.. ಜವರಾಯನ ಅಟ್ಟಹಾಸಕ್ಕೆ 6 ಜನ ಸ್ಥಳದಲ್ಲೇ ದುರ್ಮರಣ!

ಹಾವೇರಿ : ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಹಾವೇರಿ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಶವಗಳನ್ನು ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗುತ್ತೆ. ಮೃತಪಟ್ಟ 6 ಜನ ರಾಣೆಬೆನ್ನೂರು ನಗರದ ಅಶೋಕ್ ನಗರದ ನಿವಾಸಿಗಳು ಎಂದು ಪ್ರಾಥಮಿಕ ತನಿಖೆಯಲ್ಲಿ ಮಾಹಿತಿ ಲಭ್ಯವಾಗಿದೆ. ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ : ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ.. ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ ‘ಪಬ್ಬಾರ್’ ಟೈಟಲ್ ಫಿಕ್ಸ್!

Btv Kannada
Author: Btv Kannada

Read More