“ಆಪರೇಷನ್ ಸಿಂಧೂರ” ಭಾರತೀಯ ಸೇನೆಗೆ ಸರ್ಕಾರ ಬೆಂಬಲ – ಸಿಎಂ ನೇತೃತ್ವದಲ್ಲಿ ನಾಳೆ ಬೆಂಗಳೂರಲ್ಲಿ ತಿರಂಗಾ ಯಾತ್ರೆ!

ಬೆಂಗಳೂರು : ಪಹಲ್ಗಾಮ್​ ಉಗ್ರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಸರ್ಕಾರ ಬೆಂಬಲ ಸೂಚಿಸಿದೆ. ನಾಳೆ ಬೆಳಗ್ಗೆ 9.30-10.30 ರವರೆಗೆ ಬೆಂಗಳೂರಿನ ಕೆ.ಆರ್. ವೃತ್ತದಿಂದ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂ ಬಳಿ ಇರುವ ಮಿನ್ಸ್ಕ್ ಸ್ಕ್ವೇರ್ ವರೆಗೆ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುವ ಈ ಯಾತ್ರೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಾಹಿತಿಗಳು, ಚಿಂತಕರು, ಚಿತ್ರರಂಗದವರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಸರ್ವರೂ ಭಾಗವಹಿಸಲು ಮುಕ್ತ ಆಹ್ವಾನ ನೀಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ : IPL ಆಯೋಜನೆಯಲ್ಲಿ ನಿಯಮ ಉಲ್ಲಂಘನೆ, ಅವ್ಯವಹಾರ ಆರೋಪ – KSCA ವಿರುದ್ಧ ಕ್ರಮಕ್ಕೆ MLC ದಿನೇಶ್‌ ಗೂಳಿಗೌಡ ಪತ್ರ!

Btv Kannada
Author: Btv Kannada

Read More