ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಮತ್ತೊಂದು​ ಶಾಕ್​.. ಶಾಸಕ ಸ್ಥಾನದಿಂದ ಅನರ್ಹ – ಎಷ್ಟು ವರ್ಷ?

ಬೆಂಗಳೂರು : ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಸದ್ಯ ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಇದೀಗ ಮತ್ತೊಂದು ಶಾಕ್​ ಎದುರಾಗಿದ್ದು, ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಇದನ್ನೂ ಓದಿ : INS ವಿಕ್ರಾಂತ್ ಪರಾಕ್ರಮ – ಪಾಕಿಸ್ತಾನದ ಕರಾಚಿ ಬಂದರು ಸಂಪೂರ್ಣ ಧ್ವಂಸ!

Btv Kannada
Author: Btv Kannada

Read More