ಪಾಕಿಸ್ತಾನಕ್ಕೆ ಭಾರತ ಸೇನೆಯಿಂದ ಸರಣಿ ಅಟ್ಯಾಕ್ – ಗಡಿ ನುಸುಳಲು ಯತ್ನಿಸಿದ 7 ಮಂದಿ ಜೈಶ್‌ ಉಗ್ರರನ್ನು ಹೊಡೆದುರುಳಿಸಿದ BSF!

ನವದೆಹಲಿ : ಅಕ್ರಮವಾಗಿ ಭಾರತಕ್ಕೆ ನುಸುಳುತ್ತಿದ್ದ ಜೈಶ್-ಎ-ಮೊಹಮ್ಮದ್‌ ಸಂಘಟನೆಯ 7 ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಸಾಂಭಾದಲ್ಲಿ ಭಾರತದ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಗುರುವಾರ ಹಲವು ಗಂಟೆಗಳ ಕಾಲ ನಡೆದ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ (BSF) ವಿಫಲಗೊಳಿಸಿದೆ. ಅಂತಾರಾಷ್ಟ್ರೀಯ ಗಡಿಯನ್ನು ಅಕ್ರಮವಾಗಿ ಪ್ರವೇಶಿಸಲು ಯತ್ನಿಸುತ್ತಿದ್ದಾಗ ಬಿಎಸ್‌ಎಫ್‌ ಯೋಧರು ಗುಂಡಿಕ್ಕಿ ಕೊಂದಿದ್ದಾರೆ. ಈ ಮಾಹಿತಿಯನ್ನು ಬಿಎಸ್‌ಎಫ್‌ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಇನ್ನು ನಿನ್ನೆ ರಾತ್ರಿ ಪಾಕಿಸ್ತಾನ ಡ್ರೋನ್​ ಮತ್ತು ಮಿಸೈಲ್​ಗಳನ್ನು ಬಳಸಿ ಭಾರತದ ಹಲವು ನಗರಗಳ ಮೇಲೆ ದಾಳಿಗೆ ಯತ್ನಿಸಿದ್ದು. ಈ ಎಲ್ಲಾ ಪ್ರಯತ್ನವನ್ನು ಭಾರತ ವಿಫಲಗೊಳಿಸಿದೆ. ಅಷ್ಟೇ ಅಲ್ಲದೇ ಪಾಕಿಸ್ತಾನದ ರಾಜಧಾನಿ ಇಸ್ಲಮಾಬಾದ್​ ಸೇರಿದಂತೆ ಪ್ರಮುಖ ನಗರಗಳ ಮೇಲೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ : ಬೆಂಗಳೂರು : ಹವಾಲ ಅಮೌಂಟ್ ದೋಚಿದ್ದ ಮೂವರು ಪೊಲೀಸರು​​ ಅರೆಸ್ಟ್!

Btv Kannada
Author: Btv Kannada

Read More