ಭಾರತ-ಪಾಕ್ ನಡುವೆ ಉದ್ವಿಗ್ನತೆ.. 2025ರ IPL ಟೂರ್ನಿ ರದ್ದುಗೊಳಿಸಿದ ಬಿಸಿಸಿಐ!

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್​ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಿದೆ.

ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್‌ ಪಂದ್ಯವನ್ನು ಅರ್ಧದಲ್ಲೇ ಮೊಟಕುಗೊಳಿಸಲಾಗಿತ್ತು. ಇದೀಗ ಮೇ 25 ರವರೆಗೆ ನಡೆಯಬೇಕಿದ್ದ IPL ಟೂರ್ನಿಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ವಿದೇಶಿ ಆಟಗಾರರ ಭದ್ರತೆಯ ದೃಷ್ಟಿಯಿಂದ BCCI ಯಾವುದೇ ಸವಾಲುಗಳನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಾಗಿ ದೇಶದಲ್ಲಿ ನಡೆಯಬೇಕಿದ್ದ ಈ ಬಾರಿಯ IPL ಟೂರ್ನಿಯನ್ನು ಸಂಪೂರ್ಣವಾಗಿ ಮುಂದೂಡಿಕೆ ಮಾಡಲಾಗಿದೆ. ಈ ಹಿಂದೆ 2021ರ ಕೋವಿಡ್‌ ಸಂದರ್ಭದಲ್ಲಿಯೂ ಐಪಿಎಲ್‌ ಟೂರ್ನಿಯನ್ನ ರದ್ದುಗೊಳಿಸಲಾಗಿತ್ತು.

ಆರ್​ಸಿಬಿ ಅಭಿಮಾನಿಗಳಿಗೆ ಬೇಸರ : ಈ ಬಾರಿ ಆರ್​ಸಿಬಿ ಪಾಯಿಂಟ್ ಟೇಬಲ್​​ನಲ್ಲಿ ಎರಡನೇ ಸ್ಥಾನದಲ್ಲಿ ಇತ್ತು. ಈ ಮೂಲಕ ಕಪ್ ಗೆಲ್ಲುವ ಕನಸನ್ನು ಕಾಣುತ್ತಿತ್ತು. 18 ವರ್ಷಗಳ ಕಪ್ ಗೆಲ್ಲುವ ಕನಸು ನನಸಾಗಲಿದೆ ಎಂದು ಆರ್​ಸಿಬಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಐಪಿಎಲ್ ಪಂದ್ಯವೇ ರದ್ದಾಗಿ ಹೋಗಿರುವುದು ಆರ್​ಸಿಬಿ ಅಭಿಮಾನಿಗಳ ಕನಸಿಗೆ ತಣ್ಣೀರು ಎರಚಿದಂತೆ ಆಗಿದೆ.

ಇದನ್ನೂ ಓದಿ :  ಪಾಕಿಸ್ತಾನಕ್ಕೆ ಭಾರತ ಸೇನೆಯಿಂದ ಸರಣಿ ಅಟ್ಯಾಕ್ – ಗಡಿ ನುಸುಳಲು ಯತ್ನಿಸಿದ 7 ಮಂದಿ ಜೈಶ್‌ ಉಗ್ರರನ್ನು ಹೊಡೆದುರುಳಿಸಿದ BSF!

 

 

 

 

 

Btv Kannada
Author: Btv Kannada

Read More