ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ನಂತರ ಉಭಯ ದೇಶಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ತನ್ನ ಚಟುವಟಿಕೆಗಳಿಂದ ಹಿಂದೆ ಸರಿಯದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದೆ. ಇಡೀ ದೇಶವೇ ಸರ್ಕಾರ ಮತ್ತು ಸೇನೆಯೊಂದಿಗೆ ನಿಂತು ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸುವ ಪ್ರಯತ್ನಗಳನ್ನು ಬೆಂಬಲಿಸುತ್ತಿವೆ.
ಈ ಬೆನ್ನಲ್ಲೇ ಇದೀಗ ನಟ ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕ್ ನಡುವಿನ ಯುದ್ಧ ಸನ್ನಿವೇಶ ಕುರಿತು ತಪ್ಪು ಮಾಹಿತಿ ಹಂಚಿಕೊಳ್ಳಬೇಡಿ ಎಂದು ಯಶ್ ಮನವಿ ಮಾಡಿದ್ದಾರೆ.
ನಮ್ಮ ಭಾರತೀಯ ಸಶಸ್ತ್ರ ಪಡೆಗಳ ಅಚಲ ಶಕ್ತಿ ಮತ್ತು ಕಾರ್ಯಕ್ಕೆ ಧನ್ಯವಾದಗಳು. ಭಾರತೀಯ ಯೋಧರ ಸೇವೆಗೆ ಧನ್ಯವಾದ ತಿಳಿಸುವುದರ ಜೊತೆಗೆ ಒಗ್ಗಟ್ಟಿನಿಂದ ನಿಂತು ಜವಾಬ್ದಾರಿಯುತವಾಗಿ ವರ್ತಿಸೋಣ. ಸಾಮಾಜಿಕ ಜಾಲತಾಣದಲ್ಲಿ ಯಾವುದಾದರೂ ವಿಚಾರ ಹಂಚಿಕೊಳ್ಳುವ ಮುನ್ನ ಮೊದಲು ಪರಿಶೀಲಿಸಿ ಎಂದಿದ್ದಾರೆ. ತಪ್ಪು ಮಾಹಿತಿಯ ವಿರುದ್ಧ ನಿಲ್ಲೋಣ. ಜೈ ಹಿಂದ್ ಎಂದು ನಟ ಯಶ್ ಬರೆದುಕೊಂಡಿದ್ದಾರೆ.
ಇದನ್ನೂ ಓದಿ : IPL ಫ್ಯಾನ್ಸ್ಗೆ ಗುಡ್ ನ್ಯೂಸ್ – BCCIನಿಂದ ಮಹತ್ವದ ನಿರ್ಧಾರ.. ಮುಂದಿನ ಪಂದ್ಯ ಯಾವಾಗ ಗೊತ್ತಾ?
