ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿ ಜಾವಿದ್ ಬಂಧನ!

ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವಿದ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ ಎಡಿಟ್ ಮಾಡಿದ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ವಿಕೃತಿ ಮೆರೆದಿದ್ದ.

ಆರೋಪಿ ಜಾವಿದ್ ಬಂಧನದ ಕುರಿತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಅವರು ಅಧಿಕೃತ ಮಾಹಿತಿ ನೀಡಿದ್ದು, ಬಿಜೆಪಿ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ನಾಗರಿಕ ಸಂಹಿತೆ (ಬಿಎನ್‌ಎಸ್) ಕಲಂ 152, 192, ಮತ್ತು 340 ರ ಅಡಿಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ : ಭಾರತ-ಪಾಕ್ ಉದ್ವಿಗ್ನತೆ : ಮೇ 15ರವರೆಗೆ ದೇಶಾದ್ಯಂತ 24 ವಿಮಾನ ನಿಲ್ದಾಣಗಳು ಬಂದ್!

Btv Kannada
Author: Btv Kannada

Read More