ನವದೆಹಲಿ : ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ್’ ನಂತರ ಉಭಯ ದೇಶಗಳ ನಡುವಿನ ಸಂಘರ್ಷ ಹೆಚ್ಚಾಗಿದೆ. ತನ್ನ ಚಟುವಟಿಕೆಗಳಿಂದ ಹಿಂದೆ ಸರಿಯದ ಪಾಕಿಸ್ತಾನಕ್ಕೆ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದೆ. ಇಡೀ ದೇಶವೇ ಸರ್ಕಾರ ಮತ್ತು ಸೇನೆಯೊಂದಿಗೆ ನಿಂತು ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸುವ ಪ್ರಯತ್ನಗಳನ್ನು ಬೆಂಬಲಿಸುತ್ತಿವೆ.
ಈವರೆಗೆ ಡ್ರೋನ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಈಗ ಭಾರತದ ಮೇಲೆ ಖಂಡಾಂತರ ಕ್ಷಿಪಣಿಯನ್ನು (ಬ್ಯಾಲಿಸ್ಟಿಕ್ ಮಿಸೈಲ್) ಪ್ರಯೋಗಿಸಿದೆ. ದೆಹಲಿಯನ್ನು ಗುರಿಯಾಗಿಸಿ ಪಾಪಿ ಪಾಕಿಸ್ತಾನ ಫತಾಹ್-II ಉಡಾವಣೆ ಮಾಡಿತ್ತು. ಆದರೆ ಭಾರತ ಈ ಕ್ಷಿಪಣಿಯನ್ನು ಆಕಾಶದಲ್ಲೇ ಛಿದ್ರಗೊಳಿಸಿದೆ. ಹರಿಯಾಣದ ಸಿರ್ಸಾದಲ್ಲಿ ಭಾರತ ಯಶಸ್ವಿಯಾಗಿ ಇದನ್ನು ಧ್ವಂಸಗೊಳಿಸಿದೆ.
ಏನಿದು ಬ್ಯಾಲಿಸ್ಟಿಕ್ ಕ್ಷಿಪಣಿ? ಪಾಕಿಸ್ತಾನದ ಫತಾಹ್-II ಅಲ್ಪ-ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದ್ದು, ಅಂದಾಜು 400 ಕಿಲೋಮೀಟರ್ ದೂರವನ್ನು ಕ್ರಮಿಸುವ ಜೊತೆಗೆ 365-ಕಿಲೋಗ್ರಾಂಗಳಷ್ಟು ಸಿಡಿತಲೆಯನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯ ಹೊಂದಿದೆ. ಬ್ಯಾಲಿಸ್ಟಿಕ್ ಕ್ಷಿಪಣಿ ಭೂಮಿಯ ವಾತಾವರಣವನ್ನು ಬಿಟ್ಟು ಬಾಹ್ಯಾಕಾಶವನ್ನು ಪ್ರವೇಶಿಸಿ ನಂತರ ಭೂಮಿಗೆ ಅಪ್ಪಳಿಸುತ್ತದೆ. ಈ ಕ್ಷಿಪಣಿ ಸಮುದ್ರದ ಒಳಗೆ ಹೋಗಿ ಮತ್ತೆ ಮೇಲೆ ಬರುವ ಸಾಮರ್ಥ್ಯವನ್ನು ಹೊಂದಿದೆ. ಇದು ಭಾರತದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯ ವರ್ಗಕ್ಕೆ ಸೇರುತ್ತದೆ.
ಇದನ್ನೂ ಓದಿ : ಭಾರತದ ವಿರೋಧದ ನಡುವೆಯೂ ‘ಪಾಪಿ’ ಪಾಕಿಸ್ತಾನಕ್ಕೆ 19 ಸಾವಿರ ಕೋಟಿ ಸಾಲ ನೀಡಿದ IMF!
