ಅಮೆರಿಕಾ ಮಧ್ಯಸ್ಥಿಕೆಯಲ್ಲಿ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ!

ಭಾರತ ಹಾಗೂ ಪಾಕಿಸ್ತಾನದ ನಡುವೆ ಘರ್ಷಣೆ ತೀವ್ರವಾದ ಬೆನ್ನಲ್ಲೇ ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ. ಇದನ್ನು ಘೋಷಣೆ ಮಾಡಲು ನನಗೆ ತುಂಬಾ ಸಂತಸವಾಗುತ್ತಿದೆ. ಈ ಒಂದು ನಿರ್ಧಾರದಿಂದ ಎರಡು ದೇಶಗಳಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನ ಹಾಗೂ ಭಾರತದ ನಡುವೆ ಘರ್ಷಣೆ ತೀವ್ರವಾಗಿತ್ತು. ಇದರಿಂದ ಪಾಕಿಸ್ತಾನ ಸಾಕಷ್ಟು ನಷ್ಟ ಅನುಭವಿಸಿ ಸಮಸ್ಯೆಗೆ ಒಳಗಾಗಿ ಭಾರತವನ್ನು ಸಂಪರ್ಕ ಮಾಡಿತ್ತು. ಈ ಎರಡು ರಾಷ್ಟ್ರಗಳ ನಡುವೆ ಅಮೆರಿಕ ಮಧ್ಯಪ್ರವೇಶಿಸಿ ಮೇ 12ರಂದು ಮಾತುಕತೆ ನಡೆಸಿತ್ತು. ಶಾಂತಿಯನ್ನು ಕಾಪಾಡುವುದಕ್ಕಾಗಿ ಭಾರತ ಒಪ್ಪಿಗೆ ಸೂಚಿಸಿದೆ. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ.

ಸತತ 48 ಗಂಟೆಗಳ ಕಾಲ ಅಮೆರಿಕಾ ಮಾತುಕತೆ ನಡೆಸಿದೆ. ಪ್ರಧಾನಿ ಮೋದಿ, ಪಾಕಿಸ್ತಾನ ಪ್ರಧಾನಿ ಶಹಭಾಜ್​ ಷರೀಫ್, ವಿದೇಶಾಂಗ ಸಚಿವ ಎಸ್​​.ಜೈಶಂಕರ್​, ಪಾಕ್​ ಸೇನೆಯ ಮುಖ್ಯಸ್ಥ ಅಸೀಮ್, ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್​ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಪಾಕ್​​ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಸಿಮ್​​ ಮಲ್ಲಿಕ್​ ಭಾಗಿಯಾಗಿದ್ದರು. ಈ ಬಗ್ಗೆ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕ್​ ರುಬಿಯೋ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ಭಾರತ-ಪಾಕ್ ಯುದ್ಧದ ವೇಳೆ ಫೇಕ್ ಸುದ್ದಿಗಳ ಹಾವಳಿ – ಸುಳ್ಳು ಮಾಹಿತಿಗೆ ಕಡಿವಾಣ ಹಾಕುವಂತೆ ಸಿಎಂ ಸೂಚನೆ!

Btv Kannada
Author: Btv Kannada

Read More