ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಹಿರಿಮಗ ವಿಧಿವಶ!

ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಅವರ ಹಿರಿಯ ಮಗ ಚಾಮರಾಜ್ ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮಧುಮೇಹದಿಂದ ಬಳಲುತ್ತಿದ್ದ ಚಾಮರಾಜ್ ಕಳೆದ ಒಂದೂವರೆ ತಿಂಗಳಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಕಳೆದೊಂದು ತಿಂಗಳಿನಿಂದ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಚಿಕಿತ್ಸೆ ಫಲಿಸದೇ ಪಿ. ಚಾಮರಾಜ್ ಇಂದು ಕೊನೆಯುಸಿರೆಳೆದಿದ್ದಾರೆ. ಶಾಸಕ ಸಿ.ಪುಟ್ಟರಂಗಶೆಟ್ಟಿ ಮತ್ತು ವೆಂಕಟಮ್ಮ‌ ದಂಪತಿಯ ಹಿರಿ ಪುತ್ರನಾಗಿರುವ ಚಾಮರಾಜ್​ಗೆ ಓರ್ವ ಸಹೋದರ, ಇಬ್ಬರು ಸಹೋದರಿಯರು, ಪತ್ನಿ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇಂದು ಸ್ವಗ್ರಾಮ ಉಪ್ಪಿನಮೋಳೆಗೆ ಪಾರ್ಥೀವ ಶರೀರ ತರಲಿದ್ದು, ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಉಪ್ಪಿನಮೋಳೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ : ಸ್ಯಾಂಡಲ್​ವುಡ್​ಗೆ ಉಪ್ಪಿ ಪುತ್ರ ಆಯುಷ್ ಎಂಟ್ರಿ ಫಿಕ್ಸ್ – ಕುಟುಂಬ ಸಮೇತ ಮಂತ್ರಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ!

Btv Kannada
Author: Btv Kannada

Read More